World Cup 2023 Final; IND vs AUS: ಟೀಂ ಇಂಡಿಯಾಗೆ ಆರಂಭಿಕ ಆಘಾತ, ಮೂರು ಪ್ರಮುಖ ವಿಕೆಟ್ ಪತನ

ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 15 ಓವರ್‌ಗಳಿಗೆ ಮೂರು ಪ್ರಮುಖ ವಿಕೆಟ್‌ಗಳನ್ನು ಕಿತ್ತಿದೆ. ಆಸಿಸ್ ಪಡೆ 97 ರನ್‌ಗಳಿಗೆ ಭಾರತವನ್ನು ಕಟ್ಟಿಹಾಕಿತ್ತು. 
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ 2023 ಫೈನಲ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ 2023 ಫೈನಲ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್
Updated on

ಅಹಮದಾಬಾದ್: ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 15 ಓವರ್‌ಗಳಿಗೆ ಮೂರು ಪ್ರಮುಖ ವಿಕೆಟ್‌ಗಳನ್ನು ಕಿತ್ತಿದೆ. ಆಸಿಸ್ ಪಡೆ 97 ರನ್‌ಗಳಿಗೆ ಭಾರತವನ್ನು ಕಟ್ಟಿಹಾಕಿತ್ತು. 

ಉಭಯ ತಂಡಗಳ ಆಡುವ ಹನ್ನೊಂದರ ಬಳಗದಲ್ಲಿ ನಿರೀಕ್ಷೆಯಂತೆ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.

ನಿಧಾನಗತಿಯ ಮತ್ತು ಶುಷ್ಕ ಪಿಚ್‌ನಲ್ಲಿ, ಆಸ್ಟ್ರೇಲಿಯಾವು ಭಾರತದ ಬ್ಯಾಟಿಂಗ್‌ ಬಳಗಕ್ಕೆ ತೀವ್ರ ಸವಾಲೊಡ್ಡಿತು. ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದೆ. 

ಪಂದ್ಯಾವಳಿಯುದ್ದಕ್ಕೂ ರೋಹಿತ್ ಶರ್ಮಾ ಈ ಹಿಂದಿನ ಪಂದ್ಯಗಳಲ್ಲಿ ಆದಂತೆಯೇ (31 ಎಸೆತಗಳಲ್ಲಿ 47) ಪವರ್‌ಪ್ಲೇನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. 

ರೋಹಿತ್ ಶರ್ಮಾ ಮೂರು ಸಿಕ್ಸರ್ ಮತ್ತು ನಾಲ್ಕು ಬೌಂಡರಿಗಳನ್ನು ಬಾರಿಸಿದರು. ಬಳಿಕ ಶುಭ್‌ಮನ್ ಗಿಲ್ 4 ಎಸೆತಗಳಲ್ಲಿ 7 ರನ್ ಗಳಿಸಿ ಆ್ಯಡಂ ಜಂಪಾ ಅವರಿಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ವಿರಾಟ್ ಕೊಹ್ಲಿ ಅವರೊಂದಿಗೆ ಉತ್ತಮ ಜೊತೆಯಾಟ ಆಡುತ್ತಿರುವಾಗಲೇ ರೋಹಿತ್ ಮ್ಯಾಕ್ಸ್‌ವೆಲ್ ಎಸೆತದಲ್ಲಿ ಟ್ರಾವಿಸ್ ಹೆಡ್‌ಗೆ ಕ್ಯಾಚ್ ನೀಡಿದರು. 

ಸ್ಟಾರ್ಕ್ ಎಸೆತದಲ್ಲಿ ಕೊಹ್ಲಿ ಸತತ ಮೂರು ಬೌಂಡರಿಗಳನ್ನು ಬಾರಿಸಿದರು. ರೋಹಿತ್ ನಂತರ ಬಂದ ಶ್ರೇಯಸ್ ಐಯ್ಯರ್ ಮೂರು ಎಸೆತಗಳಲ್ಲಿ ನಾಲ್ಕು ರನ್ ಸಿಡಿಸಿ ಜೋಶ್ ಇಂಗ್ಲಿಸ್‌ಗೆ ವಿಕೆಟ್ ಒಪ್ಪಿಸಿದರು. 

ಸದ್ಯ ಟೀಂ ಇಂಡಿಯಾ 22 ಓವರ್‌ಗಳ ಅಂತ್ಯಕ್ಕೆ ಮೂರು ವಿಕೆಟ್ ಕಳೆದುಕೊಂಡು 121 ರನ್ ಗಳಿಸಿದೆ. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com