2ನೇ ಟಿ20: ಭಾರತ ಭರ್ಜರಿ ಬ್ಯಾಟಿಂಗ್, ಆಸ್ಟ್ರೇಲಿಯಾಗೆ ಗೆಲ್ಲಲು 236 ರನ್ ಬೃಹತ್ ಗುರಿ

ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಬೃಹತ್ ಮೊತ್ತ ಪೇರಿಸಿದೆ.
ಭಾರತ ಭರ್ಜರಿ ಬ್ಯಾಟಿಂಗ್
ಭಾರತ ಭರ್ಜರಿ ಬ್ಯಾಟಿಂಗ್

ತಿರುವನಂತಪುರ: ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಬೃಹತ್ ಮೊತ್ತ ಪೇರಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ಗಳಲ್ಲಿ ಯಶಸ್ವಿ ಜೈಸ್ವಾಲ್ (53 ರನ್), ಇಶಾನ್ ಕಿಶನ್ (52 ರನ್) ಮತ್ತು ರುತುರಾಜ್ ಗಾಯಕ್ವಾಡ್ (58 ರನ್) ಅರ್ಧಶತಕಗಳ ನೆರವಿನಿಂದ 235 ರನ್ ಕಲೆಹಾಕಿತು.

ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಜೋಡಿ ಮೊದಲ ವಿಕೆಟ್ ಗೆ 77ರನ್ ಗಳ ಜೊತೆಯಾಟವಾಡಿತು. ಈ ಹಂತದಲ್ಲಿ ಅಪಾಯಕಾರಿಯಾಗಿ ಆಡುತ್ತಿದ್ದ ಯಶಸ್ವಿ ಜೈಸ್ವಾಲ್ ನಾಥನ್ ಎಲ್ಲಿಸ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಗಾಯಕ್ವಾಡ್ ಜೊತೆಗೂಡಿದ ಇಶಾನ್ ಕಿಶನ್ ಕೂಡ ಭರ್ಜರಿ ಬ್ಯಾಟಿಂಗ್ ಮಾಡಿದರು. 4 ಸಿಕ್ಸರ್, 3 ಬೌಂಡರಿಗಳ ನೆರವಿನಿಂದ ಕಿಶನ್ 52 ರನ್ ಕಲೆ ಹಾಕಿ ಸ್ಟಾಯಿನಿಸ್ ಗೆ ವಿಕೆಟ್ ಒಪ್ಪಿಸಿದರು.

ಬಳಿಕ ರುತುಕಾಜ್ ಗಾಯಕ್ವಾಡ್ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ಎಂದಿನಿಂತ ತಮ್ಮ ಆಕ್ರಮಣಕಾಗಿ ಬ್ಯಾಟಿಂಗ್ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಈ ಹಂತದಲ್ಲಿ ರುತುರಾಜ್ ಗಾಯಕ್ವಾಡ್ ಕೂಡ ಅರ್ಧಶತಕ ಸಿಡಿಸಿ ತಂಡದ ಪರ ಮೂರನೇ ಅರ್ಧಶತಕದ ಕಾಣಿಕೆ ನೀಡಿದರು. ಈ ಹಂತದಲ್ಲಿ 2 ಸಿಕ್ಸರ್ ನೆರವಿನಿಂದ 19 ರನ್ ಗಳಿಸಿದ್ದ ಸೂರ್ಯ ಕುಮಾರ್ ಯಾದವ್ ದೊಡ್ಡ ಹೊಡೆತಕ್ಕೆ ಕೈ ಹಾಕಿ ಎಲ್ಲಿಸ್ ಗೆ ವಿಕೆಟ್ ಒಪ್ಪಿಸಿದರು. 58 ರನ್ ಗಳಿಸಿದ್ದ ಗಾಯಕ್ವಾಡ್ ಅಂತಿಮ ಓವರ್ ನಲ್ಲಿ ಎಲ್ಲಿಸ್ ಗೆ ವಿಕೆಟ್ ಒಪ್ಪಿಸಿದರು.

ಅಂತಿಮವಾಗಿ ಭಾರತ ನಿಗಧಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 235ರನ್ ಗಳನ್ನು ಕಲೆಹಾಕಿ ಆಸ್ಟ್ರೇಲಿಯಾಗೆ ಗೆಲ್ಲಲು 236 ರನ್ ಗಳ ಬೃಹತ್ ಗುರಿ ನೀಡಿದೆ.

ಆಸ್ಟ್ರೇಲಿಯಾ ಪರ ನಾಥನ್ ಎಲ್ಲಿಸ್ 3 ವಿಕೆಟ್ ಪಡೆದರೆ, ಸ್ಟಾಯಿನಿಸ್ 1 ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com