ಗುವಾಹಟಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಹಣಾಹಣಿಗಾಗಿ ಟೀಂ ಇಂಡಿಯಾ ಸೋಮವಾರ ಗುವಾಹಟಿಗೆ ಆಗಮಿಸಿತು. ಆಸೀಸ್ ವಿರುದ್ಧದ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.
ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮೆನ್ ಇನ್ ಬ್ಲೂ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ದೊರೆಯಿತು. ಬಸ್ ಹತ್ತಿದ ನಂತರ ಭಾರತೀಯ ತಂಡ ಹೋಟೆಲ್‌ಗೆ ತೆರಳಿತು. ಅಲ್ಲಿ ನೃತ್ಯಗಾರರು ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸಿದರು.
ಆತಿಥೇಯರು ಮಂಗಳವಾರ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸತತ ಮೂರನೇ ಗೆಲುವಿನೊಂದಿಗೆ ಸರಣಿಯನ್ನು ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದ್ದಾರೆ. ಈ ಪಂದ್ಯದಲ್ಲೂ ರನ್ ಗಳ ಹೊಳೆ ಹರಿಯುವ ಸಾಧ್ಯತೆಯಿದೆ. ಮೊದಲ ಎರಡು ಪಂದ್ಯಗಳಲ್ಲೂ 200ಕ್ಕೂ ಹೆಚ್ಚು ರನ್ ದಾಖಲಿಸಿತ್ತು.
ಸೂರ್ಯಕುಮಾರ್ ಯಾದವ್ ನಾಯಕತ್ವದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸುತ್ತಿದ್ದಾರೆ. ಯುವ ಆಟಗಾರರಾದ ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್ ಮತ್ತು ರವಿ ಬಿಷ್ಣೋಯ್ ಅವರು ಎರಡೂ ಪಂದ್ಯಗಳಲ್ಲಿ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಆದರೆ, ಸೂರ್ಯ ಕುಮಾರ್ ಅತ್ಯುತ್ತಮ ಬ್ಯಾಟಿಂಗ್ ನೊಂದಿಗೆ ಭಾರತದ ಇನ್ನಿಂಗ್ಸ್‌ಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.
ಭಾರತ ತಂಡ ಇಂತಿದೆ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ( ವಿಕೆಟ್ ಕೀಪರ್) ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ ತಂಡ ಇಂತಿದೆ: ಮ್ಯಾಥ್ಯೂ ವೇಡ್ (ನಾಯಕ) ಆರನ್ ಹಾರ್ಡಿ, ಜೇಸನ್ ಬೆಹ್ರೆನ್‌ಡಾರ್ಫ್, ಸೀನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಕೇನ್ ರಿಚರ್ಡ್ಸನ್, ಕೇನ್ ರಿಚರ್ಡ್ಸನ್
Advertisement