ಆಸ್ಟ್ರೇಲಿಯಾ ತಂಡ
ಆಸ್ಟ್ರೇಲಿಯಾ ತಂಡ

IND vs AUS 3rd T20: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 5 ವಿಕೆಟ್ ಜಯ

ಗುವಾಹಟಿಯಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ಗಳ ಜಯ ಗಳಿಸಿದೆ. 
Published on

ಗುವಾಹಟಿ: ಗುವಾಹಟಿಯಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ಗಳ ಜಯ ಗಳಿಸಿದೆ. 

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ಹೆಡ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಭಾರತ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿ 223 ರನ್ ಗಳ ಗುರಿ ನೀಡಿತ್ತು. ಭಾರತ ತಂಡದ ಪರ ರುತುರಾಜ್‌ ಗಾಯಕ್ವಾಡ (Ruturaj Gaikwad) ಭರ್ಜರಿ ಶತಕ ಸಿಡಿಸುವ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು.

ಈ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 20 ಓವರ್‌ಗೆ 5 ವಿಕೆಟ್‌‌ ನಷ್ಟಕ್ಕೆ 225 ರನ್‌ ಗಳಿಸುವ ಮೂಲಕ 5 ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 2-1ರ ಅಂತರದಿಂದ ಮುನ್ನಡೆ ಸಾಧಿಸಿದ್ದು, ಆಸ್ಟ್ರೇಲಿಯಾಗೆ ಸರಣಿ ಗೆಲ್ಲುವ ಆಸೆ ಜೀವಂತವಾಗಿ ಉಳಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com