ಐಸಿಸಿ ವಿಶ್ವಕಪ್ 2023 ಉದ್ಘಾಟನಾ ಪಂದ್ಯ: ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ನ್ಯೂಜಿಲೆಂಡ್

ಐಸಿಸಿ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡದ ನಾಯಕರು
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡದ ನಾಯಕರು
Updated on

ಮೊಟೇರಾ: ಐಸಿಸಿ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಅವರ ಸಮ್ಮುಖದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ಟಾಮ್ ಲ್ಯಾಥಮ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡರು. 

2019ರ ಫೈನಲ್ ನಲ್ಲಿ ಪ್ರಶಸ್ತಿಗಾಗಿ ಸೆಣಸಾಟ ನಡೆಸಿದ್ದ ಉಭಯ ತಂಡಗಳು ಇದೀಗ ಮತ್ತೆ ಮುಖಾಮುಖಿಯಾಗಿದ್ದು, ನ್ಯೂಜಿಲೆಂಡ್ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಕಣಕ್ಕಿಳಿದಿದೆ. ಆದರೆ, ನ್ಯೂಜಿಲೆಂಡ್ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದ್ದು, ನಾಯಕ ಕೇನ್ ವಿಲಿಯಮ್ಸ್ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ. ಆದ್ದರಿಂದ ಟಾಮ್ ಲಥಾಮ್ ನಾಯಕತ್ವ ವಹಿಸಿದ್ದಾರೆ. ಮತ್ತೊಂದೆಡೆ ಜೋಸ್ ಬಟ್ಲರ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. 

ಇಂಗ್ಲೆಂಡ್ ತಂಡ ಇಂತಿದೆ: ಜಾಸ್ ಬಟ್ಲರ್ (ನಾಯಕ) ಜೋ ರೂಟ್, ಜಾನಿ ಬೆಸ್ಟೊ (ವಿಕೆಟ್ ಕೀಪರ್) ಹ್ಯಾರಿ ಬ್ರೂಕ್ಸ್, ಲಿಯಾಮ್ ಲಿವಿಂಗ್ ಸ್ಟೋನ್, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್, ಮೋಯಿನ್ ಅಲಿ, ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಡೇವಿಡ್ ವಿಲಿ, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟಾಪ್ಲಿ, ಗಸ್ ಅಟ್ಕಿನ್ಸನ್.

ನ್ಯೂಜಿಲೆಂಡ್ ತಂಡ ಇಂತಿದೆ: ಟಾಮ್ ಲಥಾಮ್ (ನಾಯಕ) ವಿಲ್ ಯಂಗ್, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಜೇಮ್ಸ್ ನಿಶಾಮ್, ಗ್ಲೆನ್ ಫಿಲಿಪ್ಸ್ (ವಿಕೆಟ್ ಕೀಪರ್) ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟನರ್, ಈಶ್ ಸೋಧಿ, ಟಿಮ್ ಸೌಧಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗ್ಯುಸನ್, ಮ್ಯಾಟ್ ಹೆನ್ರಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com