ಐಸಿಸಿ ವಿಶ್ವಕಪ್: ಅಫ್ಘಾನಿಸ್ತಾನ್ ವಿರುದ್ಧ ಟೀಮ್ ಇಂಡಿಯಾಗೆ 8 ವಿಕೆಟ್ ಭರ್ಜರಿ ಜಯ

ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಕಲೆಹಾಕಿತು.

ಗೆಲುವಿಗೆ 273 ರನ್​ಗಳ ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಇಶಾನ್ ಕಿಶನ್ (47) ಹಾಗೂ ನಾಯಕ ರೋಹಿತ್ ಶರ್ಮಾ ಅವರ ಉತ್ತಮ ಆರಂಭ ಒದಗಿಸಿದ್ದರು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾ(131) ಭರ್ಜರಿ ಶತಕ ಸಿಡಿಸಿ ಭಾರತ ಗೆಲುವಿಗೆ ಕಾರಣರಾದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಅಜೇಯ 55 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಅಫ್ಘಾನಿಸ್ತಾನ ಪರ ಹಷ್ಮತ್ ಉಲ್ಲಾ ಶಾಹಿದಿ ಹಾಗೂ ಅಜ್ಮತ್ ಉಲ್ಲಾ ಒಮರ್ ಝೈ ಅವರು ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಶಾಹಿದಿ 88 ಎಸೆತಗಳಲ್ಲಿ 80 ರನ್ ಗಳಿಸಿದರೆ, ಒಮರ್ ಝೈ 69 ಎಸೆತಗಳಲ್ಲಿ 62 ರನ್ ಗಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com