ಪಾಕ್ ಅಭಿಮಾನಿಗಳಿಗೆ ವೀಸಾ ವಿಳಂಬ, ಮೈದಾನದಲ್ಲಿ ಅನುಚಿತ ವರ್ತನೆ: ಐಸಿಸಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತೆ ದೂರು

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ ಸೋಲನ್ನು ಅರಗಿಸಿಕೊಳ್ಳಲಾಗದೇ ಸಂಕಷ್ಟ ಅನುಭವಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ PCB ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ICCಗೆ ಮತ್ತೊಂದು ದೂರು ನೀಡಿದೆ.
ಪಾಕಿಸ್ತಾನ vs ಭಾರತ ಪಂದ್ಯ
ಪಾಕಿಸ್ತಾನ vs ಭಾರತ ಪಂದ್ಯ

ಇಸ್ಲಾಮಾಬಾದ್: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ ಸೋಲನ್ನು ಅರಗಿಸಿಕೊಳ್ಳಲಾಗದೇ ಸಂಕಷ್ಟ ಅನುಭವಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ PCB ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ICCಗೆ ಮತ್ತೊಂದು ದೂರು ನೀಡಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ), ಮಂಗಳವಾರ ಸಂಜೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, "ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ತಂಡವನ್ನು ಗುರಿಯಾಗಿಸಿಕೊಂಡು ಅನುಚಿತ ವರ್ತನೆ ತೋರಲಾಗಿದೆ ಈ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ಅಧಿಕೃತ ದೂರು ಸಲ್ಲಿಸಲಾಗಿದೆ ಎಂದು ಹೇಳಿದೆ. ಅಲ್ಲದೆ ಈ 2023ರ ವಿಶ್ವಕಪ್ ಅನ್ನು ವರದಿ ಮಾಡಲು ಬಯಸುವ ಪಾಕಿಸ್ತಾನದ ಪತ್ರಕರ್ತರಿಗೆ ವೀಸಾ ವಿಳಂಬದ ಬಗ್ಗೆ 'ಔಪಚಾರಿಕ ಪ್ರತಿಭಟನೆ' ನಡೆಸುತ್ತಿದೆ ಎಂದು ಪಿಸಿಬಿ ಹೇಳಿದೆ.

"ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಪಾಕಿಸ್ತಾನಿ ಪತ್ರಕರ್ತರಿಗೆ ವೀಸಾ ವಿಳಂಬ ಮತ್ತು ನಡೆಯುತ್ತಿರುವ ವಿಶ್ವಕಪ್ 2023 ಗಾಗಿ ಪಾಕಿಸ್ತಾನ ಅಭಿಮಾನಿಗಳಿಗೆ ವೀಸಾ ನೀತಿಯ ಅನುಪಸ್ಥಿತಿಯ ಬಗ್ಗೆ ಐಸಿಸಿಗೆ ಮತ್ತೊಂದು ಔಪಚಾರಿಕ ಪ್ರತಿಭಟನೆಯನ್ನು ಸಲ್ಲಿಸಿದೆ" ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ  ಪೋಸ್ಟ್ ಮಾಡಿದೆ. 

ಆದರೆ ಈ ದೂರಿನಲ್ಲಿ ODI ಕ್ರಿಕೆಟ್ ವಿಶ್ವಕಪ್ ಪಂದ್ಯದ ಬಗ್ಗೆ ಅಸಮಾಧಾನಗೊಂಡ ಘಟನೆಯ ನಿಖರ ಸ್ವರೂಪದ ಬಗ್ಗೆ PCB ಸ್ಪಷ್ಟಪಡಿಸಿಲ್ಲ. ಕಳೆದ ವಾರ ಅಂದರೆ ಅಕ್ಟೋಬರ್ 14ರಂದು ಅಹಮದಾಬಾದ್‌ನಲ್ಲಿ ನಡೆದ ಹೈವೋಲ್ಟೇಜ್ ಹಣಾಹಣಿಯಲ್ಲಿ ಭಾರತವು ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿತ್ತು. ಈ ಸೋಲಿನ ಬೆನ್ನಲ್ಲೇ ಪಿಸಿಬಿ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ವ್ಯಾಪಕ ಟೀಕಾ ಪ್ರಹಾರಗಳು ಹರಿದು ಬಂದಿದ್ದವು. ಇದೀಗ ತನ್ನ ವಿರುದ್ಧದ ಟೀಕೆಗಳನ್ನು ಬೇರೆಡೆ ತಿರುಗಿಸಲು ಪ್ರಯತ್ನಿಸುತ್ತಿರುವ ಪಿಸಿಬಿ ಅಟಾಗಾರರ ವಿರುದ್ಧ ಅನುಚಿತ ವರ್ತನೆ ತೋರಲಾಗಿದೆ ಎಂದು ಆರೋಪಿಸುತ್ತಿದೆ. 

"14 ಅಕ್ಟೋಬರ್ 2023 ರಂದು ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ತಂಡವನ್ನು ಗುರಿಯಾಗಿಸಿಕೊಂಡು ಅನುಚಿತ ವರ್ತನೆಯ ಬಗ್ಗೆ PCB ದೂರು ದಾಖಲಿಸಿದೆ." ಪಾಕಿಸ್ತಾನಿ ಪತ್ರಕರ್ತರಿಗೆ ವೀಸಾ ವಿಳಂಬ ಮತ್ತು ನಡೆಯುತ್ತಿರುವ ವಿಶ್ವಕಪ್ 2023ಗಾಗಿ ಪಾಕಿಸ್ತಾನ ಅಭಿಮಾನಿಗಳಿಗೆ ವೀಸಾ ನೀತಿಯ ಅನುಪಸ್ಥಿತಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಐಸಿಸಿಗೆ ಮತ್ತೊಂದು ಔಪಚಾರಿಕ ಪ್ರತಿಭಟನೆಯನ್ನು ಸಲ್ಲಿಸಿದೆ ಎಂದು ಪಿಸಿಬಿ ಟ್ವೀಟ್ ಮಾಡಿದೆ.

ಇನ್ನು ಈ ಹಿಂದೆ ಪಾಕಿಸ್ತಾನ ತಂಡದ ನಿರ್ದೇಶಕ ಮತ್ತು ಮುಖ್ಯ ತರಬೇತುದಾರ ಮಿಕ್ಕಿ ಆರ್ಥರ್, ಭಾರತ ವಿರುದ್ಧದ ಸೋಲಿನ ನಂತರ ಪ್ರೇಕ್ಷಕರ ವರ್ತನೆ ಮತ್ತು ತಂಡದ ಮೇಲೆ ಅದರ ಪ್ರಭಾವದ ಬಗ್ಗೆ ಮಾತನಾಡಿದ್ದರು. ಮೈದಾನಲ್ಲಿದ್ದ ಅಪಾರ ಸಂಖ್ಯೆ ಭಾರತೀಯ ಕ್ರೀಡಾಭಿಮಾನಿಗಳು ಪಾಕಿಸ್ತಾನ ತಂಡದ ವಿರುದ್ಧ ಅನುಚಿನ ವರ್ತನೆ ತೋರಿ ಅವರ ಆಟಗಾರರ ಗಮನವನ್ನು ಹಾಳು ಮಾಡಿದರು ಎಂದು ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com