ಬೆಂಗಳೂರಿನಲ್ಲಿ ಐಸಿಸಿ ವಿಶ್ವಕಪ್ : ಆಸ್ಟ್ರೇಲಿಯಾ ಎದುರು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕಿಸ್ತಾನ

ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.
ಟಾಸ್ ಗೆದ್ದ ಪಾಕ್ ನಾಯಕ ಬಾಬರ್
ಟಾಸ್ ಗೆದ್ದ ಪಾಕ್ ನಾಯಕ ಬಾಬರ್
Updated on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.

ಉಭಯ ತಂಡಗಳು ಈವರೆಗೂ ತಲಾ ಮೂರು ಪಂದ್ಯಗಳನ್ನು ಆಡಿವೆ. ಈ ಪೈಕಿ ಪಾಕ್ ಎರಡರಲ್ಲಿ ಗೆಲುವು ಸಾಧಿಸಿದರೆ, ಆಸೀಸ್ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ಪಾಕಿಸ್ತಾನ ತಂಡ ಇಂತಿದೆ: ಬಾಬರ್ ಅಜಂ (ನಾಯಕ) ಅಬ್ದುಲ್ ಶಫೀಕ್, ಇಮಾಮ್ ಉಲ್ ಹಕ್, ಮೊಹಮ್ಮದ್ ರಿಜ್ವಾನ್, ಸಾದ್ ಶಕೀಲ್, ಇಫ್ತಿಕಾರ್ ಅಹಮದ್, ಮೊಹಮ್ಮದ್ ನವಾಜ್, ಉಸಾಮ ಮಿರ್, ಹಸನ್ ಅಲಿ, ಶಾಹೀನ್ ಆಫ್ರೀದಿ ಮತ್ತು ಹ್ಯಾರಿಸ್ ರವೂಫ್ 

ಆಸ್ಟ್ರೇಲಿಯಾ ತಂಡ ಇಂತಿದೆ: ಪ್ಯಾಟ್ ಕಮಿನ್ಸ್ (ನಾಯಕ) ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಷೇನ್, ಗ್ಲೆನ್ ಮ್ಯಾಕ್ ವೆಲ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ, ಜೋಶ್ ಹ್ಯಾಜಲ್ ವುಡ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com