ಲಖನೌ: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ (ICC Cricket World Cup 2023)ಯ ಇಂದಿನ ಹಾಲಿ ಚಾಂಪಿಯನ್ ಇಂಗ್ಲೆಂಡ್ (England) ವಿರುದ್ಧದ ಪಂದ್ಯದಲ್ಲಿ ದಿಢೀರ್ ಕುಸಿತ ಕಂಡ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಆಸರೆಯಾಗಿದ್ದು, ತಮ್ಮ ಸಮಯೋಚಿತ ಬ್ಯಾಟಿಂಗ್ ಮೂಲಕ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.
ಲಖನೌನ ಏಕಾನ ಕ್ರಿಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸುತ್ತಿರುವ ಭಾರತ ತಂಡಕ್ಕೆ ಇಂಗ್ಲೆಂಡ್ ಬೌಲರ್ ಗಳು ಆರಂಭಿಕ ಆಘಾತ ನೀಡಿದರು. ಕೇವಲ 40 ರನ್ ಗಳಿಗೆ ಭಾರತ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆರಂಭಿಕ ಆಟಗಾರ ಶುಭ್ ಮನ್ ಗಿಲ್ (Shubhman Gill) ಕೇವಲ 7 ರನ್ ಗಳಿಸಿ ವೋಕ್ಸ್ ಗೆ ವಿಕೆಟ್ ಒಪ್ಪಿಸಿದರೆ, ಬಳಿಕ ಬಂದ ವಿರಾಟ್ ಕೊಹ್ಲಿ (Virat Kohli) ಶೂನ್ಯಕ್ಕೆ ಔಟಾಗುವ ಮೂಲಕ ಆಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಶ್ರೇಯಸ್ ಅಯ್ಯರ್ ಕೂಡ ಕೇವಲ 4ರನ್ ಗಳಿಸಿ ಔಟಾಗುವ ಮೂಲಕ ಭಾರತ ತಂಡ (Team India)ಕ್ಕೆ ಆಘಾತ ನೀಡಿದರು.
ಇದನ್ನೂ ಓದಿ: ಎಸ್ಬಿಐ ಬ್ರಾಂಡ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ನೇಮಕ!
ಈ ಹಂತದಲ್ಲಿ ಜೊತೆಯಾದ ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ (KL Rahul) ಜೋಡಿ ನಿಧಾನವಾಗಿ ಭಾರತ ತಂಡದ ಇನ್ನಿಂಗ್ಸ್ ಗೆ ಜೀವ ತುಂಬಿದರು. ರೋಹಿತ್ ಶರ್ಮಾ (Rahit Sharma) ಅರ್ಧಶತಕಗಳಿಸಿದ್ದು, ಅವರಿಗೆ ರಾಹುಲ್ ಉತ್ತಮ ಸಾಥ್ ನೀಡುತ್ತಿದ್ದಾರೆ.
Most 50+ scores in World Cups
21 S Tendulkar (44 innings)
12 Rohit Sharma (23)
12 V Kohli (32)
12 Shakib Al Hasan (34)
12 K Sangakkara (35)
ಕೊಹ್ಲಿ ದಾಖಲೆ ಸರಿಗಟ್ಟಿದ 'ಹಿಟ್ ಮ್ಯಾನ್'
ಇನ್ನು ಈ ಅರ್ಧಶತಕದ ಮೂಲಕ ರೋಹಿತ್ ಶರ್ಮಾ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದರು. ವಿಶ್ವಕಪ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಮತ್ತು ರೋಹಿತ್ ಶರ್ಮಾ ಜಂಟಿ 2ನೇ ಸ್ಥಾನದಲ್ಲಿದ್ದಾರೆ. 21 ಬಾರಿ ಈ ಸಾಧನೆ ಮಾಡಿರುವ ಭಾರತದ ಸವ್ಯಸಾಚಿ ಸಚಿನ್ ತೆಂಡೂಲ್ಕರ್ (Sachin Tendulkar) ಅಗ್ರಸ್ಥಾನದಲ್ಲಿದ್ದು, ತಲಾ 12 ಬಾರಿ ಈ ಸಾಧನೆ ಮಾಡಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ಈ ಪೈಕಿ ರೋಹಿತ್ ಶರ್ಮಾ 23 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದು, ವಿರಾಟ್ ಕೊಹ್ಲಿ ಈ ಸಾಧನೆಗಾಗಿ 32 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ.
34 ಇನ್ನಿಂಗ್ಸ್ ಗಳಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ 12 ಬಾರಿ ಈ ಸಾಧನೆ ಮಾಡಿದ್ದು, ಶ್ರೀಲಂಕಾದ ಕುಮಾರ ಸಂಗಕ್ಕಾರ 35 ಇನ್ನಿಂಗ್ಸ್ ಗಳಲ್ಲಿ 12 ಬಾರಿ 50ಕ್ಕೂ ಹೆಚ್ಚು ರನ್ ಗಳ ಸಾಧನೆ ಮಾಡಿದ್ದಾರೆ.
ಇದೇ ಪಂದ್ಯದಲ್ಲಿ ರೋಹಿತ್ ಶರ್ಮಾ ಏಕದಿನದಲ್ಲಿ ತಮ್ಮ 18 ಸಾವಿರ ರನ್ ಪೂರೈಸಿದರೆ, ಕೆಎಲ್ ರಾಹುಲ್ 2500ರನ್ ಪೂರೈಸಿದ್ದು ವಿಶೇಷವಾಗಿತ್ತು.
Advertisement