ಏಷ್ಯಾ ಕಪ್ 2023: ಪಾಕ್-ಭಾರತ ಪಂದ್ಯಕ್ಕೆ ಮಳೆ ಅಡ್ಡಿ, ಭಾರತ 147/2!

ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್ 2023 ಸೂಪರ್ 4 ಪಂದ್ಯ ಇಂದು ಕೊಲಂಬೊದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಪಾಕ್ ನಾಯಕ ಬಾಬರ್ ಅಜಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್ 2023 ಸೂಪರ್ 4 ಪಂದ್ಯ ಇಂದು ಕೊಲಂಬೊದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಪಾಕ್ ನಾಯಕ ಬಾಬರ್ ಅಜಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. 

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬಲಿಷ್ಠ ಸ್ಥಿತಿ ತಲುಪಿದೆ. ಆದರೆ, ಭಾರತ ಇನಿಂಗ್ಸ್‌ನ 25ನೇ ಓವರ್‌ನಲ್ಲಿ ಮಳೆಯಿಂದಾಗಿ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಇನ್ನು ಭಾರತ ಈ ವೇಳೆಗೆ 2 ವಿಕೆಟ್ ನಷ್ಟಕ್ಕೆ 147 ರನ್ ಪೇರಿಸಿದೆ.

ಭಾರತ ಪರ ರೋಹಿತ್ ಶರ್ಮಾ 56 ರನ್ ಗಳಿಸಿ ಔಟಾದರೆ ಶುಭ್ಮನ್ ಗಿಲ್ 58 ರನ್ ಪೇರಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಅಜೇಯ 8 ರನ್ ಗಳಿಸಿದ್ದರೆ ಕೆಎಲ್ ರಾಹುಲ್ ಅಜೇಯ 17 ರನ್ ಗಳಿಸಿದ್ದಾರೆ. 

ಪಾಕಿಸ್ತಾನ ಪರ ಶಾಹೀನ್ ಶಾ ಅಫ್ರಿದಿ ಮತ್ತು ಶದಾಬ್ ಖಾನ್ ತಲಾ 1 ವಿಕೆಟ್ ಪಡೆದಿದ್ದಾರೆ. ಈ ಪಂದ್ಯಕ್ಕೆ ಮೀಸಲು ಪಂದ್ಯ ಇರುವುದರಿಂದ ಇಂದು ಪಂದ್ಯ ನಿಂತರೂ ನಾಳೆ ಇದೇ ಓವರ್ ನಿಂದ ಆರಂಭವಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com