ಏಷ್ಯಾ ಕಪ್ 2023: ಮಳೆ ಅಡ್ಡಿ, ಪಾಕ್-ಭಾರತ ಪಂದ್ಯ ನಾಳೆಗೆ ಮುಂದೂಡಿಕೆ

ಕೊಲಂಬೊದಲ್ಲಿ ನಡೆಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್ 2023 ಸೂಪರ್ 4 ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದ್ದು ಪಂದ್ಯ ನಾಳೆಗೆ ಮುಂದೂಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕೊಲಂಬೊದಲ್ಲಿ ನಡೆಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್ 2023 ಸೂಪರ್ 4 ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದ್ದು ಪಂದ್ಯ ನಾಳೆಗೆ ಮುಂದೂಡಲಾಗಿದೆ.

ಟಾಸ್ ಗೆದ್ದ ಪಾಕ್ ನಾಯಕ ಬಾಬರ್ ಅಜಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬಲಿಷ್ಠ ಓಪನಿಂಗ್ ಪಡೆದುಕೊಂಡಿತ್ತು. ಆದರೆ, ಭಾರತ ಇನಿಂಗ್ಸ್‌ನ 25ನೇ ಓವರ್‌ನಲ್ಲಿ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಈ ವೇಳೆ ಭಾರತ 2 ವಿಕೆಟ್ ನಷ್ಟಕ್ಕೆ 147 ರನ್ ಪೇರಿಸಿತ್ತು.

ಇನ್ನು ಮಳೆ ನಿಲ್ಲುವ ಯಾವುದೇ ಸೂಚನೆಗಳು ಕಂಡುಬರದ ಹಿನ್ನೆಲೆಯಲ್ಲಿ ಪಂದ್ಯವನ್ನು ನಾಳೆಗೆ ಮುಂದೂಡಲಾಗಿದೆ. ಇನ್ನು 2023ರ ಏಷ್ಯಾಕಪ್ ಟೂರ್ನಿ ಮೇಲೆ ಮಳೆಯ ಕರಿಛಾಯೆ ಇರುವುದರಿಂದ ಕೆಲ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಅದರಂತೆ ನಾಳೆ ಪಾಕ್-ಭಾರತ ಪಂದ್ಯ 25ನೇ ಓವರ್ ನಿಂದಲೇ ಆರಂಭವಾಗಲಿದೆ.

ಭಾರತ ಪರ ರೋಹಿತ್ ಶರ್ಮಾ 56 ರನ್ ಗಳಿಸಿ ಔಟಾದರೆ ಶುಭ್ಮನ್ ಗಿಲ್ 58 ರನ್ ಪೇರಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಅಜೇಯ 8 ರನ್ ಗಳಿಸಿದ್ದರೆ ಕೆಎಲ್ ರಾಹುಲ್ ಅಜೇಯ 17 ರನ್ ಗಳಿಸಿದ್ದಾರೆ. ಪಾಕಿಸ್ತಾನ ಪರ ಶಾಹೀನ್ ಶಾ ಅಫ್ರಿದಿ ಮತ್ತು ಶದಾಬ್ ಖಾನ್ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com