ಏಷ್ಯಾ ಕಪ್ 2023: ವಿರಾಟ್ ಕೊಹ್ಲಿ ಸಿಡಿಲಬ್ಬರದ ಬ್ಯಾಟಿಂಗ್, ಸಂಗಕ್ಕಾರ ದಾಖಲೆ ಸರಿಗಟ್ಟಿದ ಭಾರತದ ರನ್ ಮೆಷಿನ್

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ್ದು ಮಾತ್ರವಲ್ಲದೇ ಏಷ್ಯಾಕಪ್ ಟೂರ್ನಿಯಲ್ಲಿ ಸಂಗಕ್ಕಾರ ದಾಖಲೆ ಸರಿಗಟ್ಟಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಸಂಗಕ್ಕಾರ
ವಿರಾಟ್ ಕೊಹ್ಲಿ ಮತ್ತು ಸಂಗಕ್ಕಾರ

ಕೊಲಂಬೋ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ್ದು ಮಾತ್ರವಲ್ಲದೇ ಏಷ್ಯಾಕಪ್ ಟೂರ್ನಿಯಲ್ಲಿ ಸಂಗಕ್ಕಾರ ದಾಖಲೆ ಸರಿಗಟ್ಟಿದ್ದಾರೆ.

ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ವಿರಾಟ್ ಕೊಹ್ಲಿ ಕೇವಲ 94 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ ಬರೊಬ್ಬರಿ ಅಜೆಯೇ 122ರನ್ ಗಳನ್ನು ಪೇರಿಸಿದರು. ಅಂತೆಯೇ ಏಕದಿನ ಕ್ರಿಕೆಟ್ ವೃತ್ತಿ ಜೀವನದ ತಮ್ಮ 47ನೇ ಶತಕವನ್ನೂ ಪೂರೈಸಿಕೊಂಡರು. ಅಲ್ಲದೆ ಏಕದಿನ ಕ್ರಿಕೆಟ್ ವೃತ್ತಿ ಜೀವನದಲ್ಲಿ 13000 ರನ್ ಪೂರೈಸಿದರು. 

ಈ ಶತಕದ ಮೂಲಕ ವಿರಾಟ್ ಕೊಹ್ಲಿ ಈಗ ಏಷ್ಯಾಕಪ್‌ನಲ್ಲಿ ಶ್ರೀಲಂಕಾದ ಕ್ರಿಕೆಟ್ ದಂತಕಥೆ ಕುಮಾರ ಸಂಗಕ್ಕಾರ ಅವರ ನಾಲ್ಕು ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ.

ಏಷ್ಯಾ ಕಪ್ ನಲ್ಲಿ ಈ ವರೆಗೂ ಅತೀ ಹೆಚ್ಚು ಶತಕಗಳನ್ನು ಸಿಡಿಸಿದ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ ಅವರ ಹೆಸರಿನಲ್ಲಿದ್ದು, ಜಯಸೂರ್ಯ ಒಟ್ಟು 6 ಶತಕಗಳನ್ನು ಸಿಡಿಸಿದ್ದಾರೆ. ಅದೇ ಶ್ರೀಲಂಕಾ ತಂಡದ ಕುಮಾರ ಸಂಗಕ್ಕಾರ ಒಟ್ಟು 4 ಶತಕಗಳನ್ನು ಸಿಡಿಸಿ ಈ ವರೆಗೂ 2ನೇ ಸ್ಥಾನದಲ್ಲಿದ್ದರು. ಈವರೆಗೂ 3 ಶತಕಗಳೊಂದಿಗೆ 3ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಇಂದು ನಾಲ್ಕನೇ ಶತಕ ಸಿಡಿಸಿ ಜಂಟಿ 2ನೇ ಸ್ಥಾನಕ್ಕೇರಿದ್ದಾರೆ. ಉಳಿದಂತೆ ಪಾಕಿಸ್ತಾನದ ಶೊಯೆಬ್ ಮಲ್ಲಿಕ್ 3 ಶತಕಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

Most 100s in ODI Asia Cup:
6 - Sanath Jayasuriya
4 - Virat Kohli*
4 - Kumar Sangakkara
3 - Shoaib Malik

ಸೋಲಿನ ಸುಳಿಯಲ್ಲಿ ಪಾಕಿಸ್ತಾನ
ಇನ್ನು ಇಂದಿನ ಪಂದ್ಯದಲ್ಲಿ ಮಳೆಯ ಅಡಚಣೆ ಹೊರತಾಗಿಯೂ ಪಾಕಿಸ್ತಾನ ತಂಡ ಸೋಲಿನ ಸುಳಿಗೆ ಸಿಲುಕಿದೆ. ಭಾರತ ನೀಡಿದ 357ರನ್ ಗಳ ಗುರಿಯನ್ನು ಬೆನ್ನು ಹತ್ತಿರುವ ಪಾಕಿಸ್ತಾನ ತಂಡ 29.3 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 119ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ಪಾಕಿಸ್ತಾನ ಗೆಲ್ಲಲು ಇನ್ನು 123 ಎಸೆತಗಳಲ್ಲಿ 238 ರನ್ ಗಳನ್ನು ಗಳಿಸಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com