ಏಷ್ಯಾ ಕಪ್ 2023: ಸಾಧಾರಣ ಮೊತ್ತದ ಹೊರತಾಗಿಯೂ ಲಂಕನ್ನರಿಗೆ ಸೋಲುಣಿಸಿದ ಭಾರತ, ಫೈನಲ್ ಗೆ ಲಗ್ಗೆ

ನಿನ್ನೆಯಷ್ಟೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಹೆಡೆಮುರಿ ಕಟ್ಟಿದ್ದ ಭಾರತ ತಂಡ ಏಷ್ಯಾ ಕಪ್ ಟೂರ್ನಿಯಲ್ಲಿ ತನ್ನ ಜೈತ್ರ ಯಾತ್ರೆ ಮುಂದುವರೆಸಿದ್ದು, ಇಂದು ಶ್ರೀಲಂಕಾ ತಂಡವನ್ನು ಸೋಲಿಸಿ ಟೂರ್ನಿ ಫೈನಲ್ ಗೆ ಭರ್ಜರಿಯಾಗಿ ಲಗ್ಗೆ ಇಟ್ಟಿದೆ.
ಭಾರತ ಫೈನಲ್ ಗೆ ಲಗ್ಗೆ
ಭಾರತ ಫೈನಲ್ ಗೆ ಲಗ್ಗೆ
Updated on

ಕೊಲಂಬೋ: ನಿನ್ನೆಯಷ್ಟೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಹೆಡೆಮುರಿ ಕಟ್ಟಿದ್ದ ಭಾರತ ತಂಡ ಏಷ್ಯಾ ಕಪ್ ಟೂರ್ನಿಯಲ್ಲಿ ತನ್ನ ಜೈತ್ರ ಯಾತ್ರೆ ಮುಂದುವರೆಸಿದ್ದು, ಇಂದು ಶ್ರೀಲಂಕಾ ತಂಡವನ್ನು ಸೋಲಿಸಿ ಟೂರ್ನಿ ಫೈನಲ್ ಗೆ ಭರ್ಜರಿಯಾಗಿ ಲಗ್ಗೆ ಇಟ್ಟಿದೆ.

ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ 2023ರ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4 ಪಂದ್ಯದಲ್ಲಿ ಭಾರತ ತಂಡ ಸಾಧಾರಣ ಮೊತ್ತ ಗಳಿಸಿಯೂ ಅದನ್ನು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಆತಿಥೇಯ ಶ್ರೀಲಂಕಾ ತಂಡವನ್ನು 41 ರನ್‌ಗಳಿಂದ ಮಣಿಸಿದೆ. ಆ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ 2023ರ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಫೈನಲ್ ತಲುಪಿದ ಮೊದಲ ತಂಡವಾಯಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ 49.1 ಓವರ್‌ಗಳಲ್ಲಿ ಕೇವಲ 213 ರನ್‌ಗಳಿಗೆ ಆಲೌಟ್ ಆಯಿತು. 214 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ 41.3 ಓವರ್‌ಗಳಲ್ಲಿ 172 ರನ್‌ಗಳಿಗೆ ಸರ್ವಪತನ ಕಂಡು ಸೋಲೊಪ್ಪಿಕೊಂಡಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com