ಕೊಲಂಬೋ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕುಲದೀಪ್ ಯಾದವ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಇಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 41 ರನ್ ಗಳ ಅಂತರದಲ್ಲಿ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ನಡೆಸಿದ್ದ ಭಾರತ 49.1 ಓವರ್‌ಗಳಲ್ಲಿ ಕೇವಲ 213 ರನ್‌ಗಳಿಗೆ ಆಲೌಟ್ ಆಯಿತು. 214 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ 41.3 ಓವರ್‌ಗಳಲ್ಲಿ 172 ರನ್‌ಗಳಿಗೆ ಸರ್ವಪತನ ಕಂಡು 41 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು. ಆ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ 2023ರ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಫೈನಲ್ ತಲುಪಿದ ಮೊದಲ ತಂಡವಾಯಿತು.
ಈ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಕುಲದೀಪ್ ಯಾದವ್, 9.3 ಓವರ್ ನಲ್ಲಿ 43 ರನ್ ನೀಡಿ 4 ವಿಕೆಟ್ ಪಡೆದರು. ಆ ಮೂಲಕ ಕುಲದೀಪ್ ಯಾದವ್ ತಮ್ಮ ಏಕದಿನ ಕ್ರಿಕೆಟ್ ವೃತ್ತಿಜೀವನದಲ್ಲಿ 150 ವಿಕೆಟ್ ಪಡೆದ ಸಾಧನೆ ಮಾಡಿದರು. ಆ ಮೂಲಕ ಕುಲದೀಪ್ ಯಾದಲ್ 2 ಪ್ರಮುಖ ವಿಶ್ವದಾಖಲೆಗಳಲ್ಲಿ ತಮ್ಮ ಹೆಸರು ದಾಖಲಿಸಿಕೊಂಡರು.
ಪಂದ್ಯಗಳ ಲೆಕ್ಕಾಚಾರದಲ್ಲಿ ವೇಗದ 150 ವಿಕೆಟ್ ಪಡೆದ 4ನೇ ಸ್ಪಿನ್ನರ್
ಇನ್ನು ಈ ಪಂದ್ಯದಲ್ಲಿ 4 ವಿಕೆಟ್ ಪಡೆದು 150 ವಿಕೆಟ್ ಸಾಧನೆ ಮಾಡಿದ ಕುಲದೀಪ್ ಯಾದವ್, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಪಂದ್ಯಗಳ ಲೆಕ್ಕಾಚಾರದಲ್ಲಿ ವೇಗವಾಗಿ 150 ವಿಕೆಟ್ ಪಡೆದ 4ನೇ ಸ್ಪಿನ್ನರ್ ಎಂಬ ಕೀರ್ತಿಗೆ ಭಾಜನರಾದರು. ಕುಲದೀಪ್ ಯಾದವ್ ಒಟ್ಟು 88 ಪಂದ್ಯಗಳಲ್ಲಿ 150 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ಪಾಕಿಸ್ತಾನದ ಸಕ್ಲೈನ್ ಮುಷ್ತಾಕ್ 78 ಪಂದ್ಯಗಳಲ್ಲಿ 150 ವಿಕೆಟ್ ಸಾಧನೆ ಮಾಡಿ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಅಫ್ಘಾನಿಸ್ತಾನದ ರಷೀದ್ ಖಾನ್ ಇದ್ದು, ರಷೀದ್ 80 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ 84 ಪಂದ್ಯಗಳಲ್ಲಿ 150 ವಿಕೆಟ್ ಪಡೆದ ಶ್ರೀಲಂಕಾದ ಸ್ಪಿನ್ನರ್ ಅಜಂತಾ ಮೆಂಡಿಸ್ ಇದ್ದು, ನಂತರದ ಸ್ಥಾನದಲ್ಲಿ ಕುಲದೀಪ್ ಯಾದವ್ ಮತ್ತು ಐದನೇ ಸ್ಥಾನದಲ್ಲಿ ಪಾಕಿಸ್ತಾನದ ಇಮ್ರಾನ್ ತಾಹಿರ್ (89 ಪಂದ್ಯ) ಇದ್ದಾರೆ.
Fastest to 150 ODI wickets among spinners (by matches)
78 - Saqlain Mushtaq
80 - Rashid Khan
84 - Ajantha Mendis
88 - Kuldeep Yadav
89 - Imran Tahir
ಭಾರತದ ಪರ ವೇಗದ 150 ವಿಕೆಟ್ ಸಾಧನೆ, 2ನೇ ಸ್ಥಾನಕ್ಕೇರಿದ ಕುಲದೀಪ್ ಯಾದವ್
ಇನ್ನು ಭಾರತದ ಪರ ಏಕದಿನ ಕ್ರಿಕೆಟ್ ನಲ್ಲಿ ವೇಗವಾಗಿ 150 ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲೂ ಕುಲದೀಪ್ ಯಾದವ್ 2ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 80 ಪಂದ್ಯಗಳಲ್ಲಿ 150 ವಿಕೆಟ್ ಪಡೆದ ಮಹಮದ್ ಶಮಿ ಅಗ್ರಸ್ಥಾನದಲ್ಲಿದ್ದು, 88 ಪಂದ್ಯಗಳಲ್ಲಿ ಈ ಸಾಧನೆ ಮಾಡಿರುವ ಕುಲದೀಪ್ ಯಾದವ್ 2ನೇ ಸ್ಥಾನದಲ್ಲಿದ್ದಾರೆ. ನಂತರದಲ್ಲಿ ಸ್ಥಾನದಲ್ಲಿ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಇದ್ದು ಅವರು 97 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ನಂತರದಲ್ಲಿ ಸ್ಥಾನದಲ್ಲಿ ಜಹೀರ್ ಖಾನ್ (103 ಪಂದ್ಯ), ಅನಿಲ್ ಕುಂಬ್ಳೆ (106 ಪಂದ್ಯ) ಮತ್ತು ಇರ್ಫಾನ್ ಪಠಾಣ್ (106 ಪಂದ್ಯ) ಇದ್ದಾರೆ.
Fastest to 150 ODI wickets - by matches taken (India)
80 - Mohammed Shami
88 - Kuldeep Yadav
97 - Ajit Agarkar
103 - Zaheer Khan
106 - Anil Kumble
106 - Irfan Pathan
Advertisement