ಮೊದಲ ಏಕದಿನ: ಆಸ್ಟ್ರೇಲಿಯಾ ವಿರುದ್ದ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಏಷ್ಯಾಕಪ್ ಯಶಸ್ಸಿನ ಬೆನ್ನಲ್ಲೇ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ದ ಕ್ರಿಕೆಟ್ ಏಕದಿನ ಸರಣಿ ಆರಂಭವಾಗಿದ್ದು, ಮೊಹಾಲಿಯಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಮೊಹಾಲಿ: ಏಷ್ಯಾಕಪ್ ಯಶಸ್ಸಿನ ಬೆನ್ನಲ್ಲೇ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ದ ಕ್ರಿಕೆಟ್ ಏಕದಿನ ಸರಣಿ ಆರಂಭವಾಗಿದ್ದು, ಮೊಹಾಲಿಯಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದು, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಂಡ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆದ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ದ 10 ವಿಕೆಟ್ ಗಳ ಅಂತರದಲ್ಲಿ ಗೆದ್ದು ಪ್ರಶಸ್ತಿ ಜಯಿಸಿದ್ದು ಮಾತ್ರವಲ್ಲದೇ ರ್ಯಾಂಕಿಂಗ್ ನಲ್ಲೂ ಅಗ್ರ ಸ್ಥಾನಕ್ಕೇರಿತ್ತು.

ತಂಡಗಳು ಇಂತಿವೆ: 
ಆಸ್ಟ್ರೇಲಿಯಾ: 

ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಡಮ್ ಝಂಪಾ

ಭಾರತ: 
ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com