ಭಾರತ-ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ; ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ

ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈ ಹೊತ್ತಿಗೆ ಭಾರತ 9.5 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು.
ಶುಭಮನ್ ಗಿಲ್ - ಶ್ರೇಯಸ್ ಅಯ್ಯರ್
ಶುಭಮನ್ ಗಿಲ್ - ಶ್ರೇಯಸ್ ಅಯ್ಯರ್
Updated on

ಇಂದೋರ್: ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈ ಹೊತ್ತಿಗೆ ಭಾರತ 9.5 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು.

ಮಧ್ಯಪ್ರದೇಶದ ಇಂದೋರ್​ನ ಹೋಲ್ಕರ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಶುಭಮನ್ ಗಿಲ್ 27 ಎಸೆತಗಳಲ್ಲಿ 32 ರನ್ ಗಳಿಸಿ ಅಜೇಯರಾಗುಳಿದರೆ, ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 8 ರನ್ ಗಳಿಸಿ ಔಟಾದರು. ನಂತರ ಬಂದ ಶ್ರೇಯಸ್ ಅಯ್ಯರ್ 20 ಎಸೆತಗಳಲ್ಲಿ ಔಟಾಗದೆ 34 ರನ್ ಗಳಿಸಿದ್ದಾರೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊಹಾಲಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 5 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ 2ನೇ ಪಂದ್ಯದ ಮೇಲೆ ಭಾರತ ಕಣ್ಣಿಟ್ಟಿದ್ದು, ಸದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ್ದಾನೆ. ತವರಿನಲ್ಲಿ ಸರಣಿ ಗೆಲ್ಲುವ ವಿಶ್ವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com