ಗಾಯದಿಂದ ಚೇತರಿಸಿಕೊಳ್ಳದೆ ವಿಶ್ವಕಪ್‌ನಿಂದ ಹೊರಬಿದ್ದ ಅಕ್ಷರ್ ಪಟೇಲ್; ತಂಡಕ್ಕೆ ಆರ್ ಅಶ್ವಿನ್ ಎಂಟ್ರಿ!

ಭಾರತ ತಂಡದ ಆಲ್‌ರೌಂಡರ್ ಅಕ್ಷರ್ ಪಟೇಲ್ 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಏಷ್ಯಾಕಪ್ 2023 ರ ಸಂದರ್ಭದಲ್ಲಿ ಅಕ್ಷರ್ ಪಟೇಲ್ ಗಾಯಗೊಂಡಿದ್ದರು.
ಗಾಯದಿಂದ ಚೇತರಿಸಿಕೊಳ್ಳದೆ ವಿಶ್ವಕಪ್‌ನಿಂದ ಹೊರಬಿದ್ದ ಅಕ್ಷರ್ ಪಟೇಲ್; ತಂಡಕ್ಕೆ ಆರ್ ಅಶ್ವಿನ್ ಎಂಟ್ರಿ!

ನವದೆಹಲಿ: ಭಾರತ ತಂಡದ ಆಲ್‌ರೌಂಡರ್ ಅಕ್ಷರ್ ಪಟೇಲ್ 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಏಷ್ಯಾಕಪ್ 2023 ರ ಸಂದರ್ಭದಲ್ಲಿ ಅಕ್ಷರ್ ಪಟೇಲ್ ಗಾಯಗೊಂಡಿದ್ದರು. ಆದರೆ ಅವರು ಇನ್ನೂ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅವರ ಬದಲಿ ಆಟಗಾರನನ್ನು ಘೋಷಿಸಬೇಕಾಯಿತು. 

2023ರ ವಿಶ್ವಕಪ್‌ನಲ್ಲಿ ಅಕ್ಷರ್ ಪಟೇಲ್ ಆಡುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ದೃಢಪಡಿಸಿದೆ. ಅವರ ಬದಲಿಗೆ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ತಂಡದ ಭಾಗವಾಗಲಿದ್ದಾರೆ.

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್‌ಗಾಗಿ ಭಾರತ ತನ್ನ 15 ಸದಸ್ಯರ ತಂಡದಲ್ಲಿ ಕೊನೆಯದಾಗಿ ಬದಲಾವಣೆಗಳನ್ನು ಮಾಡಲು ಒತ್ತಾಯಿಸಲಾಗಿದೆ ಎಂದು ಐಸಿಸಿ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಏಷ್ಯಾ ಕಪ್ ಸೂಪರ್ 4 ಪಂದ್ಯದ ವೇಳೆ ಬಾಂಗ್ಲಾದೇಶದ ವಿರುದ್ಧ ಭಾರತದ ಸ್ಪಿನ್ನರ್ ಅಕ್ಷರ್ ಪಟೇಲ್ ಗಾಯಗೊಂಡಿದ್ದರು. ವಿಶ್ವಕಪ್ ಸಮಯದಲ್ಲಿ ಚೇತರಿಸಿಕೊಳ್ಳಲು ವಿಫಲರಾದ ಪರಿಣಾಮವಾಗಿ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ಅವರನ್ನು ವಿಶ್ವಕಪ್ ನಿಂದ ಹೊರಗಿಡಲಾಗಿದೆ.

ಟೀಂ ಇಂಡಿಯಾದ ಅಭ್ಯಾಸ ಪಂದ್ಯಕ್ಕಾಗಿ ಗುವಾಹಟಿ ತಲುಪಿರುವ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡವನ್ನು ಸೇರಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ODI ಸರಣಿಯಲ್ಲಿ ಅಶ್ವಿನ್ ಏಕದಿನದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅವರು ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್ ಪಡೆದಿದ್ದರು.

ಭಾರತದ ವಿಶ್ವಕಪ್ ತಂಡ
ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com