ಐಪಿಎಲ್ 2023: ಕೆಕೆಆರ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕ ರಶೀದ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
Published: 09th April 2023 04:03 PM | Last Updated: 09th April 2023 04:07 PM | A+A A-

ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ರಶೀದ್ ಖಾನ್
ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕ ರಶೀದ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡುತ್ತಿಲ್ಲ. ಹಾರ್ದಿಕ್ ಪಾಂಡ್ಯ ಅನಾರೋಗ್ಯದ ಇಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ ವಿರುದ್ಧ ಗೆದ್ದಿರುವ ಗುಜರಾತ್, ಅಂಕಪಟ್ಟಿಯಲ್ಲಿ ಮರಳಿ ನಂಬರ್ 1 ಸ್ಥಾನ ಪಡೆಯಲು ಉತ್ಸುಕವಾಗಿದೆ. ಮತ್ತೊಂದೆಡೆ ಗುಜರಾತ್ ಟೈಟನ್ಸ್ ಬ್ರಾಬಲ್ಯ ಕೊನೆಗೊಳಿಸಲು ಮತ್ತು ಈ ಬಾರಿಯ ಐಪಿಎಲ್ ನಲ್ಲಿ ಎರಡನೇ ವಿಜಯವನ್ನು ದಾಖಲಿಸಲು ಕೆಕೆಆರ್ ಉತ್ಸುಕವಾಗಿದೆ.
ಟಾಸ್ ಗೆದ್ದ ಬಳಿಕ ಮಾತನಾಡಿದ ಗುಜರಾತ್ ಟೈಟನ್ಸ್ ನಾಯಕ ರಶೀದ್ ಖಾನ್, ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಉತ್ತಮವಾಗಿ ಆಡುವ ವಿಶ್ವಾಸವಿದೆ. ಹಾರ್ದಿಕ್ ಬದಲಿಗೆ ವಿಜಯ್ ಶಂಕರ್ ತಂಡದಲ್ಲಿರುವುದಾಗಿ ತಿಳಿಸಿದರು.
ನಂತರ ಮಾತನಾಡಿದ ಕೆಕೆಆರ್ ನಾಯಕ ನಿತೀಶ್ ರಾಣಾ, ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಟಿಮ್ ಸೌಥಿ ಬದಲಿಗೆ ಫರ್ಗ್ಯುಸನ್ ಮತ್ತು ಮನದೀಪ್ ಸಿಂಗ್ ಬದಲಿಗೆ ಜಗದೀಶನ್ ತಂಡದಲ್ಲಿರುವುದಾಗಿ ತಿಳಿಸಿದರು.
ಗುಜರಾತ್ ತಂಡ ಇಂತಿದೆ: ವೃದ್ಧಿಮಾನ್ ಸಹಾ, ಶುಭ್ ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಲ್.
ಕೆಕೆಆರ್ ತಂಡ ಇಂತಿದೆ: ರಹಮಾನುಲ್ಲಾ ಗುರ್ಬಾಜ್, ಎನ್ ಜಗದೀಸನ್, ನಿತೀಶ್ ರಾಣಾ, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಸುಯಶ್ ಶರ್ಮಾ, ಲಾಕಿ ಫರ್ಗುಸನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ.