
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.
ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ 8 ರನ್‌ಗಳಿಂದ ಸೋಲನುಭವಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಮಾಡಿದ ಸಿಎಸ್‌ಕೆ ಆರಂಭದಲ್ಲೇ ರುತುರಾಜ್ ಗಾಯಕ್ವಾಡ್ ಅವರ ವಿಕೆಟ್ ಕಳೆದುಕೊಂಡಿತು. ಅತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು.
ವಿರಾಟ್ ಕೊಹ್ಲಿ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ 4 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿ ಪೆವಿಲಿಯನ್‌ನತ್ತ ಹೆಜ್ಜೆ ಹಾಕುವಂತಾಯಿತು.
'ಆರ್‌ಸಿಬಿ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಸ್‌ಕೆ ವಿರುದ್ಧ ನಡೆದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ಪಂದ್ಯ ಶುಲ್ಕದ ಶೇ 10 ರಷ್ಟು ದಂಡ ವಿಧಿಸಲಾಗಿದೆ' ಎಂದು ಸಲಹೆಗಾರ ಹೇಳಿದರು.
ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ ಅಡಿಯಲ್ಲಿ ಮೊದಲನೇ ಹಂತದ ಅಪರಾಧವನ್ನು ಮಾಡಿರುವುದಾಗಿ ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ. ಇದರಲ್ಲಿ ಪಂದ್ಯದ ರೆಫರಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಿಎಸ್‌ಕೆ ಬ್ಯಾಟರ್ ಶಿವಂ ದುಬೆ ಅವರ ವಿಕೆಟ್ ಪಡೆದಾಗ ಕೊಹ್ಲಿಯ ಸಂಭ್ರಮಾಚರಣೆಗಾಗಿ ಅವರಿಗೆ ದಂಡ ವಿಧಿಸಲಾಗಿದೆ.
ಪಂದ್ಯದ ನಿರ್ಣಾಯಕ ಘಟ್ಟದಲ್ಲಿ ಚೆನ್ನೈ ಬ್ಯಾಟರ್ ಮೊಹಮ್ಮದ್ ಸಿರಾಜ್ ಅವರಿಗೆ ಕ್ಯಾಚ್ ನೀಡಿದರು. 26 ಎಸೆತಗಳಲ್ಲಿ 52 ರನ್ ಗಳಿಸಿದ್ದ ದುಬೆ, ವೇಯ್ನ್ ಪಾರ್ನೆಲ್ ಅವರ ಬೌಲಿಂಗ್ ದಾಳಿಯಲ್ಲಿ ವಿಕೆಟ್ ಒಪ್ಪಿಸಿದರು.
ಕಳೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹೃತಿಕ್ ಶೋಕೀನ್‌ಗೆ ಇದೇ ರೀತಿಯ ದಂಡ ವಿಧಿಸಲಾಗಿತ್ತು.
ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಉತ್ತಮ ಆಟವಾಡಿದರೂ ಕೊಹ್ಲಿ ವೈಯಕ್ತಿಕವಾಗಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಆಕಾಶ್ ಸಿಂಗ್ ಎಸೆತದಲ್ಲಿ ಬೌಂಡರಿ ಬಾರಿಸಿದ ನಂತರ, ಕೊಹ್ಲಿಗೆ ದುರಾದೃಷ್ಟ ಎದುರಾಗಿತ್ತು. ಚೆಂಡು ಬ್ಯಾಟ್‌ನಿಂದ ಹೊಡೆದು ಸ್ಟಂಪ್‌ಗೆ ನುಗ್ಗಿತು. ಫಲಿತಾಂಶದ ನಂತರ ಆರ್‌ಸಿಬಿ ಈಗ ಲೀಗ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದರೆ, ಸಿಎಸ್‌ಕೆ ಮೂರನೇ ಸ್ಥಾನಕ್ಕೆ ಏರಿದೆ.
Advertisement