ಐಪಿಎಲ್ 2023: ಸನ್‌ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 14 ರನ್‌ಗಳ ಜಯ
ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 14 ರನ್‌ಗಳ ಭರ್ಜರಿ...
Published: 19th April 2023 01:23 AM | Last Updated: 19th April 2023 01:23 AM | A+A A-

ಮುಂಬೈ ಇಂಡಿಯನ್ಸ್ ತಂಡ
ಹೈದರಾಬಾದ್: ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 14 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ಇಂಡಿಯನ್ಸ್, ಕ್ಯಾಮೆರಾನ್ ಗ್ರೀನ್(ಅಜೇಯ 64 ರನ್) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.
ಇದನ್ನು ಓದಿ: ಸಾಂಪ್ರದಾಯಿಕ ಎದುರಾಳಿಗಳ ಕಾದಾಟ ನೋಡಲು ಮುಗಿಬಿದ್ದ ಜನ; ಜಿಯೋ ಸಿನಿಮಾದಲ್ಲಿ ದಾಖಲೆಯ ವೀಕ್ಷಣೆ ಕಂಡ CSK-RCB ಪಂದ್ಯ
ಗೆಲುವಿಗೆ 193 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡ, 19.5 ಓವರ್ಗಳಲ್ಲಿ 178 ರನ್ಗಳಿಸಿ ಆಲೌಟ್ ಆಯಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ 14 ರನ್‌ಗಳ ಗೆಲುವು ದಾಖಲಿಸಿತು.
ಸನ್‌ರೈಸರ್ಸ್ ಹೈದರಾಬಾದ್ ಪರ ಕನ್ನಡಿಗ ಮಯಾಂಕ್ ಅಗರ್ವಾಲ್ 48, ನಾಯಕ ಮಾರ್ಕ್ರಮ್ 22, ಹೆನ್ರಿಚ್ ಕ್ಲಾಸೆನ್ 36, ಮಾರ್ಕೊ ಜಾನ್ಸನ್ 13 ರನ್ಗಳಿಸಿದರು.
ಮುಂಬೈ ಇಂಡಿಯನ್ಸ್ ಪರ ಜೇಸನ್ ಬೆಹ್ರೆನ್ಡಾರ್ಫ್ 2, ರಿಲೇ ಮೆರಿಡಿತ್ 2, ಪಿಯೂಷ್ ಚಾವ್ಲಾ 2, ಅರ್ಜುನ್ ತೆಂಡೂಲ್ಕರ್ ಮತ್ತು ಗ್ರೀನ್ ತಲಾ ಒಂದು ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.