ಐಪಿಎಲ್ 2023: ಕೊಹ್ಲಿ ನಾಯಕತ್ವದ ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಮೊದಲಿಗೆ ಬೌಲಿಂಗ್ ಆಯ್ಕೆ

ಪಂಜಾಬಿನ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಸೆಣಸಾಟ ನಡೆಸುತ್ತಿದೆ. 
ವಿರಾಟ್ ಕೊಹ್ಲಿ, ಸ್ಯಾಮ್ ಕರನ್
ವಿರಾಟ್ ಕೊಹ್ಲಿ, ಸ್ಯಾಮ್ ಕರನ್

ಪಂಜಾಬ್: ಪಂಜಾಬಿನ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಸೆಣಸಾಟ ನಡೆಸುತ್ತಿದೆ. 

ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿಆರ್ ಸಿಬಿ ತಂಡವನ್ನು ಮುನ್ನಡೆಸುತ್ತಿದ್ದು, ಟಾಸ್ ಗಾಗಿ ಕೊಹ್ಲಿ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಂತೆಯೇ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತು. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಶಿಖರ್ ಧವನ್ ಗಾಯಗೊಂಡು ಸ್ಯಾಮ್ ಕರನ್ ಪಂಜಾಬ್ ತಂಡದ ನಾಯಕರಾಗಿದ್ದಾರೆ. 

ಟಾಸ್ ಸಂದರ್ಭದಲ್ಲಿ ಮಾತನಾಡಿದ ಕರನ್, ಕಳೆದ ಪಂದ್ಯದಲ್ಲಿ ಆದ್ದಂತೆ ಇಂದಿನ ಪಂದ್ಯದಲ್ಲಿಯೂ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದರು. ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿ, ಫಾಪ್ ಡು ಪ್ಲೆಸಿಸ್ ವೈಶಾಕ್ ಜೊತೆಗೆ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ತಿಳಿಸಿದರು. 

ಪಂಜಾಬ್ ಕಿಂಗ್ಸ್ ತಂಡ ಇಂತಿದೆ: ಅಥರ್ವ ಟೈಡೆ, ಹರ್‌ಪ್ರೀತ್ ಭಾಟಿಯಾ, ಮ್ಯಾಥ್ಯೂ ಶಾರ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಸ್ಯಾಮ್ ಕರಾನ್ (ನಾಯಕ), ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್

ಆರ್ ಸಿಬಿ ತಂಡ ಇಂತಿದೆ: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವೇಯ್ನ್ ಪಾರ್ನೆಲ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com