ಪಿಸಿಬಿ ಅಧ್ಯಕ್ಷ ನಜಮ್ ಸೇಥಿ
ಪಿಸಿಬಿ ಅಧ್ಯಕ್ಷ ನಜಮ್ ಸೇಥಿ

ಏಷ್ಯಾಕಪ್: ಭಾರತ ತಟಸ್ಥ ಸ್ಥಳದಲ್ಲಿ ಪಂದ್ಯವಾಡಬಹುದು, ಪಿಸಿಬಿ ಪ್ರಸ್ತಾವನೆ

ಭಾರತ ಏಷ್ಯಾಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಸ್ತಾಪಿಸಿದೆ. ಏಷ್ಯನ್ ಕ್ರಿಕೆಟ್ ಸಮಿತಿಗೆ (ಎಸಿಸಿ) ಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ ಶುಕ್ರವಾರ ಹೇಳಿದ್ದಾರೆ.

ಇಸ್ಲಾಮಾಬಾದ್: ಭಾರತ ಏಷ್ಯಾಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಸ್ತಾಪಿಸಿದೆ. ಏಷ್ಯನ್ ಕ್ರಿಕೆಟ್ ಸಮಿತಿಗೆ (ಎಸಿಸಿ) ಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ ಶುಕ್ರವಾರ ಹೇಳಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ ಬಿಸಿಸಿಐ ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿತ್ತು ಮತ್ತು ಪಂದ್ಯಾವಳಿಯನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿತ್ತು.

ಏಷ್ಯಾಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ತನ್ನ ತವರಿನಲ್ಲಿ ಮತ್ತು ಭಾರತ  ತಟಸ್ಥ ಸ್ಥಳದಲ್ಲಿ  ಪಂದ್ಯವಾಡಬೇಕು ಎಂದು ನಿರ್ಧರಿಸಿದ್ದು, ಈ ಸಂಬಂಧ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಸಮಿತಿಗೆ ಕಳುಹಿಸಿದ್ದೇವೆ ಎಂದು ಮಾಜಿ ಕ್ರಿಕೆಟಿಗ ರಮೀಜಾ ರಾಜಾ ಅವರಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ನಜಮ್ ಸೇಥಿ ಸುದ್ದಿಗಾರರಿಗೆ ತಿಳಿಸಿದರು. 

ಆರು ತಂಡಗಳನ್ನೊಳಗೊಂಡ ಏಷ್ಯಾ ಕಪ್ ಸೆಪ್ಟೆಂಬರ್ 2 ರಿಂದ 17 ರವರೆಗೆ ನಡೆಯಲಿದೆ. ಆದರೂ ಸ್ಥಳದ ಅನಿಶ್ಚಿತತೆಯ ಕಾರಣದಿಂದಾಗಿ ಪಂದ್ಯಗಳ ನಿಖರವಾದ ವೇಳಾಪಟ್ಟಿ ಇನ್ನೂ ಪ್ರಕಟಿಸಲಾಗಿಲ್ಲ. ಪಾಕಿಸ್ತಾನ ಮತ್ತು ಭಾರತ ಹೊರತುಪಡಿಸಿ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. 

Related Stories

No stories found.

Advertisement

X
Kannada Prabha
www.kannadaprabha.com