ಐಪಿಎಲ್ 2023: ಹೈದರಾಬಾದ್ ವಿರುದ್ಧ ಚೆನ್ನೈಗೆ 7 ವಿಕೆಟ್ ಗಳ ಭರ್ಜರಿ ಗೆಲುವು
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 29ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
Published: 22nd April 2023 01:32 AM | Last Updated: 22nd April 2023 02:46 PM | A+A A-

ಸಿಎಸ್ ಕೆ ಆಟಗಾರರ ಗೆಲುವಿನ ಸಂಭ್ರಮ
ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 29ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸನ್‌ರೈಸರ್ಸ್ ಹೈದರಾಬಾದ್, ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು.
ಗೆಲುವಿಗೆ 135 ರನ್ ಗಳ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್, ಡೆವೊನ್ ಕಾನ್ವೇ ಅವರ ಭರ್ಜರಿ ಅರ್ಧಶತಕದ ನೆರವಿನಿಂದ 18.4 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 138 ರನ್ ಗಳಿಸುವ ಮೂಲಕ 7 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತು.
ಇದನ್ನು ಓದಿ: ಐಪಿಎಲ್ 2023ರ ಜಿಯೋಸಿನಿಮಾ ರಾಯಭಾರಿಯಾಗಿ ಭಾರತದ ಸ್ಟಾರ್ ಕ್ರಿಕೆಟರ್ ರೋಹಿತ್ ಶರ್ಮಾ ಆಯ್ಕೆ!
77 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಡೆವೊನ್ ಕಾನ್ವೇ ಹಾಗೂ ಮೂರು ವಿಕೆಟ್ ಪಡೆದ ರವೀಂದ್ರ ಜಡೇಜಾ ಚೆನ್ನೈ ಸುಲಭ ಗೆಲುವಿಗೆ ಕಾರಣರಾದರು.
ಚೆನ್ನೈ ಪರ ರುತುರಾಜ್ ಗಾಯಕ್ವಾಡ್ 35 ರನ್, ಅಜಿಂಕ್ಯಾ ರಹಾನೆ 9 ರನ್ ಮತ್ತು ಅಂಬಾಟಿ ಯಾಡು 9 ರನ್, ಮೋಯಿನ್, ಅಲಿ 6 ರನ್ ಗಳಿಸಿದರು.