ಐಪಿಎಲ್ 2023: ಪಾರ್ಟಿ ವೇಳೆ ಆಟಗಾರನಿಂದ ಮಹಿಳೆ ಜೊತೆ ಅಸಭ್ಯ ವರ್ತನೆ: ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿದ ದೆಹಲಿ ತಂಡ

ಪಂದ್ಯ ಮುಕ್ತಾಯದ ಬಳಿಕ ನಡೆದ ಪಾರ್ಟಿ ವೇಳೆ ಆಟಗಾರನೋರ್ವ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಆಟಗಾರರು ಮತ್ತು ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ
ಡೆಲ್ಲಿ ಕ್ಯಾಪಿಟಲ್ಸ್ ತಂಡ

ನವದೆಹಲಿ: ಪಂದ್ಯ ಮುಕ್ತಾಯದ ಬಳಿಕ ನಡೆದ ಪಾರ್ಟಿ ವೇಳೆ ಆಟಗಾರನೋರ್ವ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಆಟಗಾರರು ಮತ್ತು ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ.

ಹೌದು.. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಆಟಗಾರರಿಗೆ ಕಟ್ಟುನಿಟ್ಟಾದ ನೀತಿ ಸಂಹಿತೆ ಮಾರ್ಗಸೂಚಿಗಳನ್ನು ತಂದಿದ್ದು, ಫ್ರಾಂಚೈಸಿಯ ಕ್ರಿಕೆಟಿಗನೊಬ್ಬ ಪಾರ್ಟಿಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಮೂಲಗಳ ಪ್ರಕಾರ ಸೋಮವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವು ಸಾಧಿಸಿದ ನಂತರ ನೀತಿ ಸಂಹಿತೆ ಜಾರಿಯಾಗಿದೆ. ಕೆಲ ದಿನಗಳ ಹಿಂದೆ ನಡೆದ ಪಾರ್ಟಿ ವೇಳೆ ತಂಡದ ಆಟಗಾರನೋರ್ವ ಪಾರ್ಟಿಯಲ್ಲಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫ್ರಾಂಚೈಸಿ ಕಟ್ಟು ನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿದೆ. ಆದರೆ ನೀತಿ ಸಂಹಿತೆಯಲ್ಲಿ ಘಟನೆಯ ವಿವರವಾಗಲೀ ಅಥವಾ ಅದರ ಉಲ್ಲೇಖವಾಗಲೀ ಇಲ್ಲ.

ಯಾವುದೇ ರೀತಿಯ ಉಲ್ಲಂಘನೆಗಾಗಿ ದಂಡಗಳು ಮತ್ತು ಒಪ್ಪಂದಗಳ ಮುಕ್ತಾಯವು ಶಿಕ್ಷೆಯಾಗಿದೆ ಎಂದು ತಂಡ ಬಿಡುಗಡೆ ಮಾಡಿರುವ ನೀತಿ ಸಂಹಿತೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ತಂಡದ ವರ್ಚಸ್ಸು ಕಾಪಾಡಲು ಫ್ರಾಂಚೈಸಿ ಮಾಲೀಕರು ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. 

ಪ್ರಸ್ತುತ, ಡಿಸಿ (ಡೆಲ್ಲಿ ಕ್ಯಾಪಿಟಲ್ಸ್) ಐಪಿಎಲ್ 2023 ಅಂಕಗಳ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಅವರು ಏಳು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಐದು ಸೋಲಿನ ನಂತರ ಒಟ್ಟು ನಾಲ್ಕು ಅಂಕಗಳನ್ನು ಹೊಂದಿದ್ದಾರೆ. ಡೆಲ್ಲಿ ತಂಡ ಮತ್ತೆ ಏಪ್ರಿಲ್ 29 ರಂದು ದೆಹಲಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com