ಐಪಿಎಲ್ 2023: 9 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಸನ್ ರೈಸರ್ಸ್ ಹೈದ್ರಾಬಾದ್
ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ 2023 ಆವೃತ್ತಿಯ 40ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ 9 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದೆ.
Published: 30th April 2023 01:13 AM | Last Updated: 30th April 2023 01:14 AM | A+A A-

ಸನ್ ರೈಸರ್ಸ್ ಹೈದ್ರಾಬಾದ್ ತಂಡ
ಹೈದ್ರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ 2023 ಆವೃತ್ತಿಯ 40ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ 9 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದ್ರಾಬಾದ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತು.
ಸನ್ ರೈಸರ್ಸ್ ಪರ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ 67, ಹೆನ್ರಿಕ್ ಕ್ಲಾಸೆನ್ ಅಜೇಯ 53, ಅಬ್ದುಲ್ ಸಮದ್ 28 ರನ್ ಗಳಿಸುವ ತಂಡ ಗೆಲ್ಲಲು ಪ್ರಮುಖ ಕೊಡುಗೆ ನೀಡಿದರು.ಡೆಲ್ಲಿ ಕ್ಯಾಪಿಟಲ್ಸ್ ಪರ ಮಿಚೆಲ್ ಮಾರ್ಷ್ 4 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ ಹಾಗೂ ಅಕ್ಸರ್ ಪಟೇಲ್ ತಲಾ 1 ವಿಕೆಟ್ ಪಡೆದರು. ಸನ್ ರೈಸರ್ಸ್ ಹೈದ್ರಾಬಾದ್ ನೀಡಿದ 198 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಲಷ್ಟೇ ಶಕ್ತವಾಯಿತು.
A valiant effort, but not our night at home. pic.twitter.com/MoIdlOvy5i
— Delhi Capitals (@DelhiCapitals) April 29, 2023
ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಲ್ಲಿ ಭಾರೀ ನಿರಾಸೆ ಮೂಡಿಸಿದರು. ಪಿಲ್ ಸಾಲ್ಟ್ 59, ಮಿಚೆಲ್ ಮಾರ್ಷ್ 63, ಅಕ್ಸರ್ ಪಟೇಲ್ 29 ರನ್ ಗಳಿಸಿದರು. ಸನ್ ರೈಸರ್ಸ್ ಪರ ಮಾಯಂಕ್ ಮಾರ್ಕಂಡೆ 2 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್, ಅಕಿಯಲ್ ಹೊಸೈನ್, ಟಿ ನಟರಾಜನ್, ಅಭಿಷೇಕ್ ಶರ್ಮಾ ತಲಾ 1 ವಿಕೆಟ್ ಪಡೆದರು. ಅದ್ಬುತ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ಮಿಚೆಲ್ ಮಾರ್ಷ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.