3ನೇ ಟಿ20: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಪದಾರ್ಪಣೆ; ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ ಆಯ್ಕೆ

ಮೊದಲೆರಡು ಪಂದ್ಯಗಳನ್ನು ಸೋತಿರುವ ಭಾರತ ತಂಡ ಮಾಡು ಇಲ್ಲವೇ ಮಡಿ ಎಂಬಂತಿರುವ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ ಆಯ್ಕೆ
ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ ಆಯ್ಕೆ
Updated on

ಗಯಾನಾ: ಮೊದಲೆರಡು ಪಂದ್ಯಗಳನ್ನು ಸೋತಿರುವ ಭಾರತ ತಂಡ ಮಾಡು ಇಲ್ಲವೇ ಮಡಿ ಎಂಬಂತಿರುವ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತ ವಿರುದ್ಧ ಇಲ್ಲಿನ ಪ್ರಾವಿಡೆನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟ್ವೆಂಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್ಮನ್ ಪೊವೆಲ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.  

ಐದು ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಭಾರತ ಮೊದಲೆರಡು ಪಂದ್ಯಗಳನ್ನು ಸೋತಿದ್ದು, ಆ ಮೂಲಕ ಸರಣಿಯಲ್ಲಿ 2-0 ಹಿನ್ನಡೆ ಅನುಭವಿಸಿದೆ. ಹೀಗಾಗಿ ಸರಣಿ ಗೆಲ್ಲಲು ಉಳಿದಿರುವ ಮೂರೂ ಪಂದ್ಯಗಳನ್ನು ಭಾರತ ಗೆಲ್ಲಲೇ ಬೇಕಾದ ಪರಿಸ್ಥಿತಿಯಲ್ಲಿದ್ದು, ಮೂರೂ ಪಂದ್ಯಗಳು ಭಾರತಕ್ಕೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯದ್ದಾಗಿದೆ.

ಜೈಸ್ವಾಲ್ ಪದಾರ್ಪಣೆ
ಇಂದಿನ ಮಹತ್ವದ ಪಂದ್ಯದಲ್ಲಿ ಭಾರತದ ಪರ ಐಪಿಎಲ್ ಸ್ಟಾರ್ ಪ್ರತಿಭೆ ಯುವ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಪದಾರ್ಪಣೆ ಮಾಡುತ್ತಿದ್ದು, ಟೀಂ ಇಂಡಿಯಾ ಪರ ಚೊಚ್ಚಲ ಪಂದ್ಯವನ್ನು ಆಡಲಿದ್ದಾರೆ. ಇತ್ತೀಚೆಗೆ ನಡೆದ ಟೆಸ್ಟ್ ಸರಣಿಯಲ್ಲೂ ಪದಾರ್ಪಣೆ ಮಾಡಿದ್ದ ಜೈಸ್ವಾಲ್ ಅಮೋಘ ಪ್ರದರ್ಶನ ನೀಡಿದ್ದರು. ಈಗ ಟಿ20 ಸರಣಿಯಲ್ಲೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 

ಇಶಾನ್ ಕಿಶನ್, ರವಿ ಬಿಷ್ಣೋಯ್ ಗೆ ವಿಶ್ರಾಂತಿ
ಜೈಸ್ವಾಲ್ ಗೆ ಸ್ಥಾನ ಕಲ್ಪಿಸುವ ಉದ್ದೇಶದಿಂದ ಇಶಾನ್ ಕಿಶನ್ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಮತ್ತೊಂದೆಡೆ ಕುಲದೀಪ್ ಯಾದವ್ ಸಹ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ರವಿ ಬಿಷ್ಣೋಯಿ ಅವಕಾಶ ವಂಚಿತರಾಗಿದ್ದಾರೆ. ಮೊದಲೆರೆಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಟೀಮ್ ಇಂಡಿಯಾ ಸರಣಿ ಸೋಲಿನ ಆತಂಕದಲ್ಲಿದೆ. ಅಲ್ಲದೆ ಸರಣಿ ಜೀವಂತವಾಗಿರಿಸಲು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com