2007ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಣೆ

2007ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್‌ನಲ್ಲಿ ತಂಡಕ್ಕೆ ಜಯ ತಂದುಕೊಟ್ಟಿದ್ದ ಭಾರತದ ಮಾಜಿ ಮಧ್ಯಮ ವೇಗಿ ಜೋಗಿಂದರ್ ಶರ್ಮಾ ಇಂದು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 
ಜೋಗಿಂದರ್ ಶರ್ಮಾ
ಜೋಗಿಂದರ್ ಶರ್ಮಾ

ನವದೆಹಲಿ: 2007ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್‌ನಲ್ಲಿ ತಂಡಕ್ಕೆ ಜಯ ತಂದುಕೊಟ್ಟಿದ್ದ ಭಾರತದ ಮಾಜಿ ಮಧ್ಯಮ ವೇಗಿ ಜೋಗಿಂದರ್ ಶರ್ಮಾ ಇಂದು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 

ಜೋಗಿಂದರ್ 2004 ಮತ್ತು 2007ರ ನಡುವೆ ನಾಲ್ಕು ಏಕದಿನ ಮತ್ತು ನಾಲ್ಕು ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದು ಒಟ್ಟಾರೆ ಐದು ವಿಕೆಟ್ಗಳನ್ನು ಪಡೆದಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಹರಿಯಾಣವನ್ನು ಪ್ರತಿನಿಧಿಸುವ ಜೋಗಿಂದರ್ ಟ್ವಿಟರ್‌ ನಲ್ಲಿ ನಿವೃತ್ತಿ ಕುರಿತು ಘೋಷಣೆ ಮಾಡಿದ್ದಾರೆ. ಅದರಂತೆ 2002ರಿಂದ 2017ರವರೆಗಿನ ನನ್ನ ಕ್ರಿಕೆಟ್ ಪ್ರಯಾಣವು ನನ್ನ ಜೀವನದ ಅತ್ಯುತ್ತಮ ವರ್ಷಗಳು ಮತ್ತು ಉನ್ನತ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವವಾಗಿತ್ತು ಎಂದು ಹೇಳಿದ್ದಾರೆ.

'ನನ್ನ ಎಲ್ಲಾ ತಂಡದ ಸಹ ಆಟಗಾರರು, ತರಬೇತುದಾರರು, ಮಾರ್ಗದರ್ಶಕರು ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಆಡಲು ಇದು ಗೌರವವಾಗಿತ್ತು. ನನ್ನ ಕನಸನ್ನು ನನಸಾಗಿಸಲು ಸಹಾಯ ಮಾಡಿದ್ದಕ್ಕಾಗಿ ನಾನು ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಜೊತೆ ಆಡುತ್ತಿದ್ದ ಅವರು ನಂತರ ಪೊಲೀಸ್ ಇಲಾಖೆಗೆ ಸೇರಿದ್ದು ಉಪ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜೋಗಿಂದರ್ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು.

ಟ್ವೀಟರ್ ನಲ್ಲಿ ನಾನು ವಿಶ್ವ ಕ್ರಿಕೆಟ್‌ನಲ್ಲಿ ಹೊಸ ಅವಕಾಶಗಳನ್ನು ಮತ್ತು ಅದರ ವ್ಯಾಪಾರದ ಬದಿಯನ್ನು ಅನ್ವೇಷಿಸುತ್ತಿದ್ದೇನೆ ಎಂದು ಘೋಷಿಸಲು ಉತ್ಸುಕನಾಗಿದ್ದೇನೆ. ಇದು ನಾನು ತುಂಬಾ ಪ್ರೀತಿಸುವ ಕ್ರೀಡೆಯೊಂದಿಗೆ ಸಂಪರ್ಕದಲ್ಲಿರಲು ಅನುವು ಮಾಡಿಕೊಡುತ್ತದೆ. ಇತ್ತೀಚೆಗೆ ಕಳೆದ ಸೆಪ್ಟೆಂಬರ್‌ನಲ್ಲಿ ಲೆಜೆಂಡ್ಸ್ ಕ್ರಿಕೆಟ್‌ ಲೀಗ್‌ನಲ್ಲಿ ಕಾಣಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com