ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ: ಶುಭ್ ಮನ್ ಗಿಲ್, ಮೊಹಮ್ಮದ್​ ಸಿರಾಜ್​ ನಾಮನಿರ್ದೇಶನ

ಕಳೆದ ತಿಂಗಳು ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಯಲ್ಲಿ ಅದ್ಬುತ ಪ್ರದರ್ಶನ ತೋರಿದ ಭಾರತದ  ಶುಭ್ ಮನ್ ಗಿಲ್ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ.
ಮೊಹಮ್ಮದ್ ಸಿರಾಜ್, ಶುಭ್ ಮನ್ ಗಿಲ್
ಮೊಹಮ್ಮದ್ ಸಿರಾಜ್, ಶುಭ್ ಮನ್ ಗಿಲ್

ಮುಂಬೈ: ಕಳೆದ ತಿಂಗಳು ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಯಲ್ಲಿ ಅದ್ಬುತ ಪ್ರದರ್ಶನ ತೋರಿದ ಭಾರತದ  ಶುಭ್ ಮನ್ ಗಿಲ್ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ.

ನ್ಯೂಜಿಲೆಂಡ್‌ನ ಡೆವೊನ್ ಕಾನ್ವೇ ನಿರ್ದಿಷ್ಟ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಮೂರನೇ ಆಟಗಾರರಾಗಿದ್ದಾರೆ.  ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶುಭ್ ಮನ್ ಗಿಲ್ ಅತ್ಯಧಿಕ ರನ್ ಗಳಿಸಿದ್ದರೆ, ಮೊಹಮ್ಮದ್ ಸಿರಾಜ್ ಏಕದಿನ ಹಾಗೂ ಟಿ-20 ಎರಡು ಮಾದರಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಮಿಂಚಿದ್ದರು. 

ಶ್ರೀಲಂಕಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ತಮ್ಮ ಮೂರನೇ ಶತಕ ಸಿಡಿಸಿದ್ದ ಯುವ ಆಟಗಾರ ಶುಭ್ ಮನ್ ಗಿಲ್ , ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 208 ರನ್ ಗಳಿಸಿದ್ದರು. ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ 112 ರನ್ ಗಳಿಸಿದರು. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಶುಭ್ ಮನ್ ಗಿಲ್ ಅವರೇ ಆಗಿದ್ದಾರೆ.

ಅದಕ್ಕೂ ಮೊದಲು ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಗಿಲ್ ತಿರುವನಂತಪುರದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ನೂರು ಸೇರಿದಂತೆ 207 ರನ್ ಗಳಿಸಿದ್ದರು. ಒಟ್ಟಾರೆಯಾಗಿ, ಅವರು ಜನವರಿಯಲ್ಲಿ ಏಕದಿನ ಪಂದ್ಯಗಳಲ್ಲಿ  113.40 ಸರಾಸರಿಯಲ್ಲಿ 567 ರನ್ ಗಳಿಸಿದರು ಜೊತೆಗೆ ಟಿ-20ಯಲ್ಲಿ  76 ರನ್ ಗಳಿಸಿದ್ದಾರೆ. 

ಮತ್ತೊಂದೆಡೆ, ಮೊಹಮ್ಮದ್ ಸಿರಾಜ್ ಲಂಕಾ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲಿ ಒಂಬತ್ತು ವಿಕೆಟ್‌ಗಳನ್ನು ಪಡೆದರೆ, ನ್ಯೂಜಿಲೆಂಡ್  ವಿರುದ್ಧದ ಏಕದಿನ ಪಂದ್ಯದಲ್ಲಿ ಆರು ವಿಕೆಟ್‌ ಪಡೆದುಕೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com