ಮೊಹಮ್ಮದ್ ಸಿರಾಜ್ ಗೆ ವಿಕೆಟ್: ಟೀಂ ಇಂಡಿಯಾ ಕೋಚ್ ದ್ರಾವಿಡ್ ಆಕ್ರಮಣಕಾರಿ ಸಂಭ್ರಮ, ವಿಡಿಯೋ ವೈರಲ್!

ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಗ್ಪುರ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಅದ್ಭುತ ಬೌಲಿಂಗ್ ಮಾಡಿದ್ದು ಆಸ್ಟ್ರೇಲಿಯಾ ತಂಡವನ್ನು 177 ರನ್ ಗಳಿಗೆ ಕಟ್ಟಿಹಾಕಿದೆ.
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್

ನಾಗ್ಪುರ: ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಗ್ಪುರ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಅದ್ಭುತ ಬೌಲಿಂಗ್ ಮಾಡಿದ್ದು ಆಸ್ಟ್ರೇಲಿಯಾ ತಂಡವನ್ನು 177 ರನ್ ಗಳಿಗೆ ಕಟ್ಟಿಹಾಕಿದೆ.

ವಿಶೇಷವಾಗಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಅವರು ಅದ್ಭುತ ಬೌಲಿಂಗ್ ಮಾಡಿ ಆಸ್ಟ್ರೇಲಿಯಾ ತಂಡದ ಆರಂಭಿಕರಾದ ಡೇವಿಡ್ ವಾರ್ನರ್ ಮತ್ತು ಉಸ್ಮಾನ್ ಖವಾಜಾ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರು. ದಿನದ ಆರಂಭದ ಎರಡನೇ ಓವರ್‌ನಲ್ಲಿಯೇ ಸಿರಾಜ್ ಆಕ್ರಮಣಕಾರಿ ಬೌಲಿಂಗ್ ಮಾಡಿ ಖವಾಜಾರನ್ನು ಎಲ್‌ಬಿಡಬ್ಲ್ಯೂ ಔಟ್ ಮಾಡಿದರು. 

ಸಿರಾಜ್ ವಿಕೆಟ್ ಪಡೆದ ಬಳಿಕ ಡ್ರೆಸ್ಸಿಂಗ್ ರೂಮ್ ನಲ್ಲಿ ರಾಹುಲ್ ದ್ರಾವಿಡ್ ಸಂಭ್ರಮಾಚರಣೆ ಅಭಿಮಾನಿಗಳ ಮನ ಗೆದ್ದಿದೆ. ದ್ರಾವಿಡ್ ತುಂಬಾ ಶಾಂತ ವ್ಯಕ್ತಿ ಮತ್ತು ಅಪರೂಪವಾಗಿ ಸಂಭ್ರಮಾಚರಣೆ ಮಾಡುತ್ತಾರೆ. ಆದರೆ ಸಿರಾಜ್ ಖ್ವಾಜಾ ಅವರನ್ನು ಔಟ್ ಮಾಡಿದ ತಕ್ಷಣ ಭಾರತ ತಂಡದ ಕೋಚ್ ಮುಖದ ಭಾವವೇ ಬದಲಾಯಿತು. ದ್ರಾವಿಡ್ ರೋಮಾಂಚನಗೊಂಡರು ಮತ್ತು ಈ ವಿಕೆಟ್ ಅನ್ನು ಸಂಭ್ರಮಿಸುತ್ತಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ರಾಹುಲ್ ಸಂಭ್ರಮಾಚರಣೆ ನೋಡಿ ಅಭಿಮಾನಿಗಳೂ ಅಚ್ಚರಿಗೊಂಡಿದ್ದಾರೆ.

ನಾಗ್ಪುರ ಟೆಸ್ಟ್ ಪಂದ್ಯದ ಕುರಿತು ಮಾತನಾಡುತ್ತಾ, ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತದ ಬೌಲರ್‌ಗಳಾದ ಶಮಿ ಮತ್ತು ಸಿರಾಜ್ ಆರಂಭದಲ್ಲಿ ಮಾರಕ ಬೌಲಿಂಗ್ ಮಾಡಿ ಕೇವಲ 2 ರನ್‌ಗಳ ಅಂತರದಲ್ಲಿ ಆರಂಭಿಕರನ್ನು ಪೆವಿಲಿಯನ್‌ಗೆ ಮರಳಿಸಿದರು. ಸಿರಾಜ್ ಖವಾಜಾ ಅವರನ್ನು ಔಟ್ ಮಾಡಿದರೆ, ಶಮಿ ವಾರ್ನರ್ ಅವರನ್ನು ಔಟ್ ಮಾಡುವ ಮೂಲಕ ಆಸ್ಟ್ರೇಲಿಯಾಕ್ಕೆ ಆರಂಭಿಕ ಆಘಾತ ನೀಡಿದರು. 

ಇನ್ನುಳಿದಂತೆ ಆಸ್ಟ್ರೇಲಿಯಾ ಪರ ಮಾರ್ನಸ್ ಲ್ಯಾಬುಸ್ಚಾಗ್ನೆ 49, ಸ್ಟೀವ್ ಸ್ಮೀತ್ 37, ಪೀಟರ್ ಹ್ಯಾಂಡ್ಸ್ಕಾಂಬ್ 31, ಅಲೆಕ್ಸ್ ಕ್ಯಾರಿ 36 ರನ್ ಬಾರಿಸಿದ್ದಾರೆ.

ಇನ್ನು ಭಾರತ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು ಮೊದಲ ದಿನದಾಟಕ್ಕೆ 77 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡಿದೆ. 20 ರನ್ ಗಳಿಸಿದ್ದ ಕೆಎಲ್ ರಾಹುಲ್ ಔಟಾಗಿದ್ದು ಅಜೇಯ 56 ರನ್ ಗಳಿಸಿರುವ ರೋಹಿತ್ ಶರ್ಮಾ ಹಾಗೂ ರವಿಚಂದ್ರನ್ ಅಶ್ವಿನ್ ಎರಡನೇ ದಿನದಾಟವನ್ನು ಆರಂಭಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com