ಬಾರ್ಡರ್-ಗವಾಸ್ಕರ್ ಟ್ರೋಫಿ: ಮೊದಲ ಟೆಸ್ಟ್, 2ನೇ ದಿನದಾಟ ಅಂತ್ಯ; ರೋಹಿತ್ ಶತಕ, ಭಾರತಕ್ಕೆ ಮುನ್ನಡೆ

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ 2ನೇ ದಿನದಾಟ ಮುಕ್ತಾಯವಾಗಿದ್ದು, ಭಾರತ 144 ರನ್ ಮುನ್ನಡೆ ಸಾಧಿಸಿದೆ. 
ಭಾರತದ ಬ್ಯಾಟಿಂಗ್
ಭಾರತದ ಬ್ಯಾಟಿಂಗ್

ನಾಗಪುರ: ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ 2ನೇ ದಿನದಾಟ ಮುಕ್ತಾಯವಾಗಿದ್ದು, ಭಾರತ 144 ರನ್ ಮುನ್ನಡೆ ಸಾಧಿಸಿದೆ. 

ಜಮ್ತಾದಲ್ಲಿರುವ ವಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾರ್ಡರ್‌–ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನ ಎರಡನೇ ದಿನದಾಟ ಅಂತ್ಯಕ್ಕೆ 114 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 321 ರನ್ ಗಳಿಸಿದೆ.  ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 144 ರನ್ ಅಂತರದಿಂದ ಮುನ್ನಡೆ ಸಾಧಿಸಿದೆ.

ನಾಯಕ ರೋಹಿತ್ ಶರ್ಮಾ 120 ರನ್ ಗಳಿಸಿ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಒಂಬತ್ತನೇ ಶತಕ ಸಾಧನೆ ಮಾಡಿದರು. ಇತ್ತ ರವೀಂದ್ರ ಜಡೇಜ ಔಟಾಗದೆ 66, ಅಕ್ಷರ್ ಪಟೇಲ್ ಔಟಾಗದೆ 52 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆಸಿಸ್ ಪರ ಟಾಡ್ ಮಾರ್ಫಿ 5 ವಿಕೆಟ್ ಪಡೆದು ಮಿಂಚಿದರೆ, ನಾಥನ್ ಲಯಾನ್ ಮತ್ತು ಪ್ಯಾಟ್ ಕಮಿನ್ಸ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮೊದಲು ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಉತ್ತಮ ಆರಂಭ ದೊರೆಯಿತು. ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ 76 ರನ್ ಗಳ ಜೊತೆಯಾಟವಾಡಿತು. ಈ ಹಂತದಲ್ಲಿ 20 ರನ್ ಗಳಿಸಿದ್ದ ರಾಹುಲ್ ಮರ್ಫಿ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ (7) ಹಾಗೂ ಭಾರತದ ರನ್ ಮೆಶಿನ್ ವಿರಾಟ್ ಕೊಹ್ಲಿ (12) ಕೂಡ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಬೇಗನೆ ವಿಕೆಟ್ ಒಪ್ಪಿಸಿದರು. ಈ ನಡುವೆ ಮತ್ತೊಂದು ತುದಿಯಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ನಾಯಕ ರೋಹಿತ್ ಶರ್ಮಾ  ಟೆಸ್ಟ್ ಕ್ರಿಕೆಟ್‌ನಲ್ಲಿ ಒಂಬತ್ತನೇ ಶತಕ ಸಾಧನೆ ಮಾಡಿದರು. 

ಇದರೊಂದಿಗೆ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಟೀಮ್ ಇಂಡಿಯಾದ ಮೊದಲ ಕಪ್ತಾನ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.  ನಾಗಪುರದ ವಿದರ್ಭ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ರೋಹಿತ್ ಅಮೋಘ ಶತಕ ಗಳಿಸಿದರು.  ಒಂದೆಡೆ ವಿಕೆಟ್ ಪತನಗೊಳ್ಳುತ್ತಿದ್ದರೂ ವಿಕೆಟ್‌ನ ಮತ್ತೊಂದು ತುದಿಯಿಂದ ಕಲಾತ್ಮಕ ಇನ್ನಿಂಗ್ಸ್ ಕಟ್ಟಿದ ರೋಹಿತ್, ಭಾರತವನ್ನು ಅಪಾಯದಿಂದ ಪಾರು ಮಾಡಿದರು.

ಚೊಚ್ಚಲ ಟೆಸ್ಟ್ ಪಂದ್ಯ ಆಡುತ್ತಿರುವ ಸೂರ್ಯಕುಮಾರ್ ಯಾದವ್ 8 ರನ್ ಗಳಿಸಿ ಔಟ್ ಆಗಿ ನಿರಾಸೆ ಅನುಭವಿಸಿದರು. ಆರ್. ಅಶ್ವಿನ್ 23 ಹಾಗೂ ಕೆ.ಎಲ್. ರಾಹುಲ್ 20 ರನ್ ಗಳಿಸಿ ಔಟ್ ಆದರು. 

ಮರ್ಫಿಗೆ ಐದು ವಿಕೆಟ್
ಪದಾರ್ಪಣೆ ಪಂದ್ಯದಲ್ಲೇ ಐದು ವಿಕೆಟ್ ಕಬಳಿಸಿರುವ ಆಸ್ಟ್ರೇಲಿಯಾದ ಸ್ಪಿನ್ನರ್ ಟಾಡ್ ಮರ್ಫಿ, ಭಾರತವನ್ನು ಕಾಡಿದರು. ಗುರುವಾರ ಸ್ಪಿನ್ ದಾಳಿಗೆ ತತ್ತರಿಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 63.5 ಓವರ್‌ಗಳಲ್ಲಿ 177 ರನ್‌ ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತ್ತು. ಎಡಗೈ ಸ್ಪಿನ್ನರ್ ರವೀಂದ್ರ ಜಡೇಜ ಐದು ವಿಕೆಟ್ ಗೊಂಚಲು ಗಳಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com