2ನೇ ಟೆಸ್ಟ್: ಬೌಲರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರ, 263 ರನ್ ಗೆ ಆಸ್ಟ್ರೇಲಿಯಾ ಆಲೌಟ್!
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ದೆಹಲಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 263 ರನ್ ಗಳಿಸಿದೆ.
Published: 17th February 2023 04:56 PM | Last Updated: 17th February 2023 04:56 PM | A+A A-

ಟೀಂ ಇಂಡಿಯಾ
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ದೆಹಲಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 263 ರನ್ ಗಳಿಸಿದೆ.
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಭಾರತೀಯ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದರು.
ಇದನ್ನೂ ಓದಿ: ಇಮ್ರಾನ್ ಖಾನ್, ಕಪಿಲ್ ದೇವ್ ದಾಖಲೆ ಪುಡಿಗಟ್ಟಿ ರವೀಂದ್ರ ಜಡೇಜಾ ವಿಶ್ವ ದಾಖಲೆ!
ಪಂದ್ಯದ ಮೊದಲ ದಿನದಮೂರನೇ ಸೆಷನ್ ನಲ್ಲಿ ಕಾಂಗರೂ ತಂಡ ಮೊದಲ ಇನಿಂಗ್ಸ್‌ನಲ್ಲಿ 263 ರನ್‌ಗಳಿಗೆ ಕುಸಿದಿದೆ. ಪೀಟರ್ ಹ್ಯಾಂಡ್ಸ್‌ಕಾಂಬ್ 72 ರನ್ ಗಳಿಸಿ ಅಜೇಯರಾಗಿ ಉಳಿದಿದ್ದು 5ನೇ ಅರ್ಧಶತಕ ಪೂರೈಸಿದ್ದಾರೆ. ಉಸ್ಮಾನ್ ಖವಾಜಾ ಇನ್ನಿಂಗ್ಸ್‌ನಲ್ಲಿ 81 ರನ್ ಗಳಿಸಿದರು. ನಾಯಕ ಪ್ಯಾಟ್ ಕಮ್ಮಿಂಗ್ 33 ರನ್ ಬಾರಿಸಿದ್ದಾರೆ.
ಭಾರತದ ಪರ ಮೊಹಮ್ಮದ್ ಶಮಿ 4, ಅಶ್ವಿನ್ ಮತ್ತು ಜಡೇಜಾ ತಲಾ 3 ವಿಕೆಟ್ ಪಡೆದಿದ್ದಾರೆ.