ಇಮ್ರಾನ್ ಖಾನ್, ಕಪಿಲ್ ದೇವ್ ದಾಖಲೆ ಪುಡಿಗಟ್ಟಿ ರವೀಂದ್ರ ಜಡೇಜಾ ವಿಶ್ವ ದಾಖಲೆ!

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದ ಉಸ್ಮಾನ್ ಖವಾಜಾರನ್ನು ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಔಟ್ ಮಾಡುವ ಮೂಲಕ ವಿಶ್ವದಾಖಲೆಯೊಂದನ್ನು ಬರೆದಿದ್ದಾರೆ.
ರವೀಂದ್ರ ಜಡೇಜಾ
ರವೀಂದ್ರ ಜಡೇಜಾ

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದ ಉಸ್ಮಾನ್ ಖವಾಜಾರನ್ನು ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಔಟ್ ಮಾಡುವ ಮೂಲಕ ವಿಶ್ವದಾಖಲೆಯೊಂದನ್ನು ಬರೆದಿದ್ದಾರೆ.

ಖವಾಜಾ ವಿಕೆಟ್‌ನೊಂದಿಗೆ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್‌ ಮತ್ತು 2500 ರನ್ ಗಳನ್ನು ಬಾರಿಸಿದ ಎರಡನೇ ಅತಿ ವೇಗದ ಆಟಗಾರ ಎನಿಸಿಕೊಂಡಿದ್ದಾರೆ. ಕೇವಲ 62 ಪಂದ್ಯಗಳಲ್ಲಿ ಅವರು ಈ ಸಾಧನೆ ಮಾಡಿದ್ದು ಪಾಕಿಸ್ತಾನದ ಮಾಜಿ ನಾಯಕ ಇಮ್ರಾನ್ ಖಾನ್ ದಾಖಲೆಯನ್ನು ಮುರಿದಿದ್ದಾರೆ. ಇಮ್ರಾನ್ 64 ಟೆಸ್ಟ್ ಪಂದ್ಯಗಳಲ್ಲಿ 250 ವಿಕೆಟ್ ಪಡೆದಿದ್ದರು. ಇನ್ನು ಇಯಾನ್ ಬೋಥಮ್ 55 ಪಂದ್ಯಗಳೊಂದಿಗೆ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 2500 ಅಥವಾ ಅದಕ್ಕಿಂತ ಹೆಚ್ಚು ರನ್ ಮತ್ತು 250 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್‌ಗಳನ್ನು ಪಡೆದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಪಾಕಿಸ್ತಾನದ ಮಾಜಿ ನಾಯಕ ಇಮ್ರಾನ್ ಖಾನ್ 88 ಪಂದ್ಯಗಳಲ್ಲಿ 362 ವಿಕೆಟ್ ಹಾಗೂ ಕಪಿಲ್ ದೇವ್ 131 ಪಂದ್ಯಗಳಲ್ಲಿ 434 ವಿಕೆಟ್ ಗಳನ್ನು ಪಡೆದಿದ್ದಾರೆ.

ಗಮನಾರ್ಹವೆಂದರೆ ರವೀಂದ್ರ ಜಡೇಜಾ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಗೆಲ್ಲುವಲ್ಲಿ ಜಡೇಜಾ ಪ್ರಮುಖ ಪಾತ್ರ ವಹಿಸಿದ್ದರು. ಜಡೇಜಾ ಏಳು ವಿಕೆಟ್‌ಗಳನ್ನು ಕಬಳಿಸಿದರು. ಅಲ್ಲದೆ ಬ್ಯಾಟಿಂಗ್‌ನೊಂದಿಗೆ 70 ರನ್‌ಗಳ ಇನ್ನಿಂಗ್ಸ್‌ಗಳನ್ನು ಸಹ ಬಾರಿಸಿದ್ದರು. ಆಲ್ ರೌಂಡ್ ಪ್ರದರ್ಶನಕ್ಕಾಗಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com