100ನೇ ಟೆಸ್ಟ್‌ನಲ್ಲಿ ಎರಡು ದಾಖಲೆ ಬರೆದ ಚೇತೇಶ್ವರ ಪೂಜಾರ!

ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಮಣಿಸಿ ನಾಲ್ಕು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
ಚೇತೇಶ್ವರ ಪೂಜಾರಾ
ಚೇತೇಶ್ವರ ಪೂಜಾರಾ

ನವದೆಹಲಿ: ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಮಣಿಸಿ ನಾಲ್ಕು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. 

ಈ ಪಂದ್ಯ ಭಾರತ ತಂಡದ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರ 100ನೇ ಟೆಸ್ಟ್ ಪಂದ್ಯವಾಗಿತ್ತು. 100 ಟೆಸ್ಟ್ ಆಡುವುದು ಯಾವುದೇ ಆಟಗಾರನ ದೊಡ್ಡ ಸಾಧನೆಯಾಗಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಪೂಜಾರ ವಿಶೇಷ ಸಾಧನೆ ಮಾಡಲಾಗದೆ ಖಾತೆ ತೆರೆಯದೆ ಪೆವಿಲಿಯನ್ ಗೆ ಮರಳಿದರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಪೂಜಾರ ಕೊನೆಯವರೆಗೂ ಉಳಿದರು ಮತ್ತು ವಿಜಯದ ಹೊಡೆತ ಅವರ ಬ್ಯಾಟ್‌ನಿಂದಲೇ ಬಂತು.

ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ಶಾಟ್ ಬಾರಿಸಿದ ಪೂಜಾರ ವಿಶೇಷ ದಾಖಲೆ ಮಾಡಿದರು. ಪೂಜಾರ ಈಗ 100ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ರನ್ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, 2006ರಲ್ಲಿ, ಪಾಂಟಿಂಗ್ ಅವರು ಸಿಡ್ನಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ರನ್ ಬಾರಿಸಿದ್ದರು.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಚೇತೇಶ್ವರ ಪೂಜಾರ ಮತ್ತೊಂದು ದಾಖಲೆ ಬರೆದಿದ್ದಾರೆ. ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಬೌಲರ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ಆಫ್ ಸ್ಪಿನ್ನರ್ ನಾಥನ್ ಲಿಯಾನ್ ವಿರುದ್ಧ ಪೂಜಾರ 532 ಟೆಸ್ಟ್ ರನ್ ಗಳಿಸಿದ್ದಾರೆ. ಈ ವೇಳೆ ಶ್ರೀಲಂಕಾದ ಕುಮಾರ ಸಂಗಕ್ಕಾರ ದಾಖಲೆಯನ್ನು ಮುರಿದರು. ಪಾಕಿಸ್ತಾನದ ಸ್ಪಿನ್ನರ್ ಸಯೀದ್ ಅಜ್ಮಲ್ ವಿರುದ್ಧದ ಟೆಸ್ಟ್‌ನಲ್ಲಿ ಸಂಗಕ್ಕಾರ 531 ರನ್ ಗಳಿಸಿದ್ದರು.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೂರನೇ ದಿನ ಭಾರತಕ್ಕೆ ಎರಡನೇ ಇನಿಂಗ್ಸ್‌ನಲ್ಲಿ ಗೆಲ್ಲಲು 115 ರನ್‌ಗಳ ಸುಲಭ ಗುರಿ ಹೊಂದಿದ್ದು, 26.4 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸಾಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com