ಐಸಿಸಿ ಏಕದಿನ ರ‍್ಯಾಂಕಿಂಗ್: 6ನೇ ಸ್ಥಾನಕ್ಕೆ ಜಿಗಿದ ವಿರಾಟ್ ಕೊಹ್ಲಿ, 8ನೇ ಸ್ಥಾನ ಪಡೆದ ರೋಹಿತ್ ಶರ್ಮಾ

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ಏಕದಿನ ಬ್ಯಾಟ್ಸ್ ಮನ್ ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಗುರುವಾರ ಪ್ರಕಟಿಸಿದ್ದು, ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ್ದ ವಿರಾಟ್ ಕೊಹ್ಲಿ 8ನೇ ಸ್ಥಾನದಿಂದ 6ನೇ ಸ್ಥಾನಕ್ಕೇರಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ಏಕದಿನ ಬ್ಯಾಟ್ಸ್ ಮನ್ ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಗುರುವಾರ ಪ್ರಕಟಿಸಿದ್ದು, ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ್ದ ವಿರಾಟ್ ಕೊಹ್ಲಿ 8ನೇ ಸ್ಥಾನದಿಂದ 6ನೇ ಸ್ಥಾನಕ್ಕೇರಿದ್ದಾರೆ.

ಇನ್ನು ಇದೇ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಶ್ರೇಯಾಂಕ ಪಟ್ಟಿಯಲ್ಲಿ 8ನೇ ಸ್ಥಾನ ಪಡೆದಿದ್ದಾರೆ.

ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಈ ಬಾರಿಯೂ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಅಗ್ರಸ್ಥಾನ ಅಲಂಕರಿಸಿದ್ದಾರೆ. ಆದರೆ ಕಳೆದ ಬಾರಿ 8ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಈ ಸಲ 2 ಸ್ಥಾನ ಜಿಗಿತ ಕಂಡಿದ್ದಾರೆ.

ಐಸಿಸಿ ಟಿ20 ಬ್ಯಾಟ್ಸ್​ಮನ್​​ಗಳ ರ‍್ಯಾಂಕಿಂಗ್ ಪಟ್ಟಿಯನ್ನೂ ಪ್ರಕಟಿಸಿದ್ದು, ಈ ಬಾರಿ ಕೂಡ ಟೀಂ ಇಂಡಿಯಾದ ಸ್ಪೋಟಕ ಬ್ಯಾಟ್ಸ್ ಮನ್​ ಸೂರ್ಯಕುಮಾರ್ ಯಾದವ್ ಅವರು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ಈ ಸಲ ಅತ್ಯಧಿಕ ಪಾಯಿಂಟ್ ಕಲೆಹಾಕುವ ಮೂಲಕ ಸರ್ವಶ್ರೇಷ್ಠ ಸಾಧನೆ ಮಾಡಿರುವುದು ವಿಶೇಷ.

ಸೂರ್ಯಕುಮಾರ್ ಯಾದವ್ ಅವರು ಟಿ20 ಶ್ರೇಯಾಂಕ ಪಟ್ಟಿಯಲ್ಲಿ 900ಕ್ಕೂ ಅಧಿಕ ಪಾಯಿಂಟ್ ಪಡೆದ ವಿಶ್ವದ ಮೂರನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com