ಲಂಕಾ ವಿರುದ್ಧದ 3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ 

ತಮಿಳುನಾಡಿನ ತಿರುವನಂತಪುರಂನಲ್ಲಿ ಇಂದು ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡರು.
ಟಾಸ್ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ
ಟಾಸ್ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ

ತಿರುವನಂತಪುರಂ: ತಮಿಳುನಾಡಿನ ತಿರುವನಂತಪುರಂನಲ್ಲಿ ಇಂದು ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡರು.

ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ  ಎರಡು ಬದಲಾವಣೆ ಮಾಡಲಾಗಿದ್ದು, ಹಾರ್ದಿಕ್ ಪಾಂಡ್ಯ, ಉಮ್ರಾನ್ ಮಲ್ಲಿಕ್ ಬದಲಿಗೆ ಸೂರ್ಯಕುಮಾರ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ತಂಡ ಸೇರಿದ್ದಾರೆ.  ಲಂಕಾ ತಂಡದಲ್ಲೂ ಕೆಲವೊಂದು ಬದಲಾವಣೆ ಮಾಡಲಾಗಿದ್ದು, ಧನಂಜಯ ಡಿ ಸಿಲ್ವಾ ಮತ್ತು ದಿನಿತ್ ವೆಲ್ಲಾಲಾಗೆ ಬದಲು ಅಶೆನ್ ಬಾಂದಾರ ಮತ್ತು ಜೆಫ್ರಿ ವಂಡರ್ ಸೆ ಅವರನ್ನು ಕರೆತರಲಾಗಿದೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಂದಿನ ಪಂದ್ಯ ಗೆಲ್ಲುವ ಮೂಲಕ ವೈಟ್ ವಾಶ್ ಮಾಡಲು ಟೀಂ ಇಂಡಿಯಾ ರಣ ತಂತ್ರ ಸಜ್ಜಾಗಿದೆ. 

ಟೀಂ ಇಂಡಿಯಾ ಇಂತಿದೆ: ರೋಹಿತ್ ಶರ್ಮಾ (ನಾಯಕ) ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್) ಸೂರ್ಯಕುಮಾರ್ ಯಾದವ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮಮದ್ ಸಿರಾಜ್

ಶ್ರೀಲಂಕಾ ತಂಡ ಇಂತಿದೆ: ಅವಿಸ್ಕಾ ಫರ್ನಾಂಡೋ, ನುವಾನಿಡು ಫರ್ನಾಂಡೋ, ಕುಶಾಲ್ ಮೆಂದೀಸ್ (ವಿಕೆಟ್ ಕೀಪರ್) ಅಸೆನ್ ಬಾಂದಾರ, ಚಾರಿತ್ ಅಸಲಂಕಾ, ದಾಸುನ್ ಶಾನಕ, ವಾನಿಂದು ಹಸರಂಗ, ಜೆಫ್ರಿ ವೆಂಡರ್ ಸೆ, ಚಾಮಿಕ ಕರುಣಾರತ್ನೆ, ಕಸನ್ ರಜಿತಾ, ಲಾಹಿರು ಕುಮಾರ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com