ಮೊದಲು ಬ್ಯಾಟಿಂಗ್ ವೇಳೆ ಸತತ 4ನೇ ಬಾರಿಗೆ 300ಕ್ಕೂ ಅಧಿಕ ರನ್ ಕಲೆಹಾಕಿದ ಭಾರತ

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 350 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ.
ಟೀಂ ಇಂಡಿಯಾ ದಾಖಲೆ
ಟೀಂ ಇಂಡಿಯಾ ದಾಖಲೆ

ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 350 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿಗ ಭಾರತ ತಂಡ ಶುಭ್ ಮನ್ ಗಿಲ್ (208 ರನ್) ದ್ವಿಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿ ನ್ಯೂಜಿಲೆಂಡ್ ಗೆ ಗೆಲ್ಲಲು 350 ರನ್ ಗಳ ಬೃಹತ್ ಗುರಿ ನೀಡಿದೆ. 

ಭಾರತದ ಪರ ನಾಯಕ ರೋಹಿತ್ ಶರ್ಮಾ 34 ರನ್ ಗಳಿಸಿದರೆ, ರನ್ ಮೆಶಿನ್ ವಿರಾಟ್ ಕೊಹ್ಲಿ ಕೇವಲ 8 ರನ್ ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು. ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಕೇವಲ 149 ಎಸೆತಗಳನ್ನು ಎದುರಿಸಿ 9 ಸಿಕ್ಸರ್ ಮತ್ತು 19 ಬೌಂಡರಿಗಳ ನೆರವಿನಿಂದ 208ರನ್ ಗಳನ್ನು ಕಲೆಹಾಕಿದರು. ಹಾರ್ದಿಕ್ ಪಾಂಡ್ಯಾ 28 ಮತ್ತು ಸೂರ್ಯ ಕುಮಾರ್ ಯಾದವ್ 31 ರನ್ ಗಳಿಸಿ ಗಿಲ್ ಗೆ ಉತ್ತಮ ಸಾಥ್ ನೀಡಿದರು. 

ಈ ಪಂದ್ಯದ ಬೃಹತ್ ರನ್ ಗಳ ಸಾಧನೆ ಮೂಲಕ ಟೀಂ ಇಂಡಿಯಾ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಸತತ 4ನೇ ಪಂದ್ಯದಲ್ಲಿ 300ಕ್ಕೂ ಅಧಿಕ ರನ್ ಗಳಿಸಿದ ಸಾಧನೆ ಮಾಡಿದೆ. ಈ ಹಿಂದೆ ಬಾಂಗ್ಲಾದೇಶ ವಿರುದ್ಧ ಚೆಟ್ಟೋಗ್ರಾಮ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 8 ವಿಕೆಟ್ ನಷ್ಟಕ್ಕೆ ದಾಖಲೆಯ 409 ರನ್ ಗಳಿಸಿತ್ತು. ಆ ಬಳಿಕ ಶ್ರೀಲಂಕಾ ವಿರುದ್ಧ ಗುವಾಹತಿಯಲ್ಲಿ ನಡೆದ ಪಂದ್ಯದಲ್ಲಿ 7 ವಿಕೆಟ್ ನಷ್ಟಕ್ಕೆ 373ರನ್ ಗಳಿಸಿತ್ತು. ನಂತರ ತ್ರಿವೆಂಡ್ರಮ್ ನಲ್ಲಿ ವಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಕಲೆಹಾಕಿತ್ತು.

ಇದೀಗ ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿ ಸತತ ನಾಲ್ಕನೇ ಬಾರಿಗೆ 300ಕ್ಕೂ ಅಧಿಕ ರನ್ ಗಳಿಸಿದ ಕೀರ್ತಿಗೆ ಭಾಜನವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com