3ನೇ ಏಕದಿನ: ನ್ಯೂಜಿಲೆಂಡ್ ವಿರುದ್ಧ ಶತಕ, ಪಾಂಟಿಂಗ್ ದಾಖಲೆ ಸರಿಗಟ್ಟುವಿಕೆ ಸೇರಿ ಹಿಟ್ ಮ್ಯಾನ್ 2 ದಾಖಲೆ

ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಎರಡೆರಡು ದಾಖಲೆ ನಿರ್ಮಿಸಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ಇಂದೋರ್: ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಎರಡೆರಡು ದಾಖಲೆ ನಿರ್ಮಿಸಿದ್ದಾರೆ.

ಇಂದೋರ್ ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ರೋಹಿತ್ ಶರ್ಮಾ (101 ರನ್), ಶುಭ್ ಮನ್ ಗಿಲ್ (112 ರನ್) ರ ಶತಕ ಮತ್ತು ಹಾರ್ದಿಕ್  ಪಾಂಡ್ಯಾ (64 ರನ್) ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 385 ರನ್ ಗಳಿಸಿದೆ. ಆ ಮೂಲಕ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು 386 ರನ್ ಗಳ ಬೃಹತ್ ಗುರಿ ನೀಡಿದೆ. 

ಭಾರತದ ರನ್ ಸುನಾಮಿಯಲ್ಲಿ ರೋಹಿತ್ ಶರ್ಮಾ ಅವರ ಶತಕದ ಪಾತ್ರವೂ ನಿರ್ಣಾಯಕವಾಗಿದ್ದು, 85 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 9 ಬೌಂಡರಿಗಳ ಸಮೇತ ರೋಹಿತ್ ಶರ್ಮಾ 101ರನ್ ಗಳಿಸಿದರು. ಆ ಮೂಲಕ ಏಕದಿನ ಕ್ರಿಕೆಟ್ ವೃತ್ತಿ ಜೀವನದ 30ನೇ ಏಕದಿನ ಶತಕ ಪೂರೈಸಿದರು. ಆ ಮೂಲಕ ಅತೀ ಹೆಚ್ಚು ಏಕದಿನ ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿ 3ನೇ ಸ್ಥಾನಕ್ಕೇರಿದ್ದಾರೆ. 

49 ಶತಕಗಳನ್ನು ಸಿಡಿಸಿರುವ ಸಚಿನ್ ತೆಂಡೂಲ್ಕರ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದು, 46 ಶತಕಗಳನ್ನು ಪೂರೈಸಿರುವ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ.

STAT: Most ODI centuries
49 Sachin Tendulkar
46 Virat Kohli
30 Rohit Sharma
30 Ricky Ponting

ಮತ್ತೊಂದು ದಾಖಲೆ
ಮತ್ತೊಂದೆಡೆ ಕೇವಲ 83 ಎಸೆತಗಳಲ್ಲಿ ಶತಕ ಪೂರೈಸಿದ ರೋಹಿತ್ ಶರ್ಮಾ ತಮ್ಮದೇ ದಾಖಲೆಯನ್ನು ಉತ್ತಮಗೊಳಿಸಿಕೊಂಡಿದ್ದಾರೆ. ಈ ಹಿಂದೆ 2018ರಲ್ಲಿ ಗುವಾಹತಿಯಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧ 84 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇಂದು 83 ಎಸೆತಗಳಲ್ಲಿ ಶತಕ ಸಿಡಿಸಿ ತಮ್ಮ 2ನೇ ವೇಗದ ಶತಕ ಸಿಡಿಸಿದ್ದಾರೆ. ಈ ಹಿಂದೆ 2018ರಲ್ಲೇ ರೋಹಿತ್ ಶರ್ಮಾ 82 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಅವರ ಏಕದಿನ ವೃತ್ತಿ ಜೀವನದ ವೇಗದ ಶತಕವಾಗಿದೆ.

STAT: Fastest ODI 100s for Rohit Sharma (by balls faced)
82 vs Eng Nottingham 2018
83 vs NZ Indore 2023 *
84 vs WI Guwahati 2018

 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com