ಮೊದಲು ಬ್ಯಾಟಿಂಗ್ ವೇಳೆ ಸತತ 5ನೇ ಬಾರಿಗೆ 300ಕ್ಕೂ ಅಧಿಕ ರನ್ ಕಲೆಹಾಕಿದ ಭಾರತ

ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 386 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ.
ಭಾರತ ಭರ್ಜರಿ ಬ್ಯಾಟಿಂಗ್
ಭಾರತ ಭರ್ಜರಿ ಬ್ಯಾಟಿಂಗ್

ಇಂದೋರ್: ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 386 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ.

ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ ತಂಡ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಭರ್ಜರಿ ಆರಂಭ ಒದಗಿಸಿದರು. ಮೊದಲ ವಿಕೆಟ್ ಗೆ ಈ ಜೋಡಿ ಬರೊಬ್ಬರಿ 212ರನ್ ಗಳ ಅಮೋಘ ಜೊತೆಯಾಟ ನೀಡಿತು. ಈ ಪೈಕಿ ಇಬ್ಬರೂ ಆರಂಭಿಕರು ಶತಕ ಸಿಡಿಸಿದ್ದು ವಿಶೇಷವಾಗಿತ್ತು. 85 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 9 ಬೌಂಡರಿಗಳ ಸಮೇತ ರೋಹಿತ್ ಶರ್ಮಾ 101ರನ್ ಗಳಿಸಿದರೆ, 78 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 13 ಬೌಂಡರಿಗಳ ನೆರವಿನಿಂದ ಗಿಲ್ 112 ರನ್ ಚಚ್ಚಿದರು.

ಈ ಪಂದ್ಯದ ಬೃಹತ್ ರನ್ ಗಳ ಸಾಧನೆ ಮೂಲಕ ಟೀಂ ಇಂಡಿಯಾ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಸತತ 5ನೇ ಪಂದ್ಯದಲ್ಲಿ 300ಕ್ಕೂ ಅಧಿಕ ರನ್ ಗಳಿಸಿದ ಸಾಧನೆ ಮಾಡಿದೆ. 

ಈ ಹಿಂದೆ ಬಾಂಗ್ಲಾದೇಶ ವಿರುದ್ಧ ಚೆಟ್ಟೋಗ್ರಾಮ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 8 ವಿಕೆಟ್ ನಷ್ಟಕ್ಕೆ ದಾಖಲೆಯ 409 ರನ್ ಗಳಿಸಿತ್ತು. ಆ ಬಳಿಕ ಶ್ರೀಲಂಕಾ ವಿರುದ್ಧ ಗುವಾಹತಿಯಲ್ಲಿ ನಡೆದ ಪಂದ್ಯದಲ್ಲಿ 7 ವಿಕೆಟ್ ನಷ್ಟಕ್ಕೆ 373ರನ್ ಗಳಿಸಿತ್ತು. ನಂತರ ತ್ರಿವೆಂಡ್ರಮ್ ನಲ್ಲಿ ವಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಕಲೆಹಾಕಿತ್ತು. ಇದೇ ಟೂರ್ನಿಯ ಹೈದರಾಬಾದ್ ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 349ರನ್ ಕಲೆಹಾಕಿತ್ತು. 

ಇದೀಗ ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿ ಸತತ ನಾಲ್ಕನೇ ಬಾರಿಗೆ 300ಕ್ಕೂ ಅಧಿಕ ರನ್ ಗಳಿಸಿದ ಕೀರ್ತಿಗೆ ಭಾಜನವಾಗಿದೆ.

STAT: India last five ODIs batting first
409/8 vs Ban Chattogram
373/7 vs SL Guwahati
390/5 vs SL Trivandrum
349/8 vs NZ Hyderabad
385/9 vs NZ Indore

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com