ವಿಶ್ವ ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ಇತಿಹಾಸ: ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್; ನಂಬರ್ 1 ಪಟ್ಟಕ್ಕೇರಿದ ರೋಹಿತ್ ಶರ್ಮಾ ಪಡೆ
ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಏಕಪಕ್ಷೀಯ ಕ್ಲೀನ್ ಸ್ವೀಪ್ ಗೆಲುವು ದಾಖಲಿಸಿದ್ದು, ಈ ಮೂಲಕ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನಕ್ಕೇರಿದೆ.
Published: 25th January 2023 12:37 PM | Last Updated: 25th January 2023 04:05 PM | A+A A-

ಟೀಂ ಇಂಡಿಯಾ ಅಗ್ರ ಸ್ಥಾನಕ್ಕೆ
ಇಂದೋರ್: ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಏಕಪಕ್ಷೀಯ ಕ್ಲೀನ್ ಸ್ವೀಪ್ ಗೆಲುವು ದಾಖಲಿಸಿದ್ದು, ಈ ಮೂಲಕ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನಕ್ಕೇರಿದೆ.
ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್: ಏಕದಿನ ಐಸಿಸಿ ರ‍್ಯಾಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ ಅದ್ಭುತ ಆಟ ಪ್ರದರ್ಶಿಸಿದ್ದು, ಟೀಂ ಇಂಡಿಯಾ ಸತತ ಮೂರು ಪಂದ್ಯಗಳನ್ನು 3-0 ಅಂತರದಲ್ಲಿ ಗೆಲ್ಲುವ ಮೂಲಕ ಪ್ರವಾಸಿ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಭಾರತ ತಂಡ 114 ಅಂಕಗಳೊಂದಿಗೆ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನಕ್ಕೆ ತಲುಪಿದೆ. 113 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದ ಇಂಗ್ಲೆಂಡ್ ತಂಡ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು, 112 ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ಐಸಿಸಿಯ ವರ್ಷದ ತಂಡ-2022 ರಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಪಂತ್
ಇದೇ ವೇಳೆ ಭಾರತ ಪ್ರವಾಸಕ್ಕೆ ಆಗಮಿಸಿರುವ ನ್ಯೂಜಿಲೆಂಡ್ ತಂಡ 117 ಅಂಕಗಳೊಂದಿಗೆ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿತ್ತು. ಸತತ ಮೂರು ಪಂದ್ಯಗಳಲ್ಲಿ ಭಾರಿ ಸೋಲು ಅನುಭವಿಸಿದ ಅವರು 111 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಈ ಮೂಲಕ ಭಾರತ ತಂಡ ವಿಶ್ವಕಪ್ 2023 ಮೊದಲು ಏಕದಿನ ರ್ಯಾಂಕಿಂಗ್ನಲ್ಲಿ ನಂಬರ್1 ಪಟ್ಟಕ್ಕೇರುವ ಮೂಲಕ ಮತ್ತೊಮ್ಮೆ ಅಭಿಮಾನಿಗಳಲ್ಲಿ ವಿಶ್ವಕಪ್ ಆಸೆ ಚಿಗುರೊಡೆಯುವಂತೆ ಮಾಡಿದೆ.