ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
Published: 27th January 2023 07:24 PM | Last Updated: 27th January 2023 07:30 PM | A+A A-

ಹಾರ್ದಿಕ್ ಪಾಂಡ್ಯ ಮತ್ತು ಮಿಚೆಲ್ ಸ್ಯಾಂಟ್ನರ್
ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ ಟಿ-20 ಪಂದ್ಯದಲ್ಲೂ ಕಿವೀಸ್ ವಿರುದ್ಧ ಗೆದ್ದು ದಾಖಲೆ ಮಾಡುವ ತವಕದಲ್ಲಿದೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ , ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ವಿರಾಮದಲ್ಲಿದ್ದು ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ಮಿಂಚುವ ಅವಕಾಶವಿದೆ.
ಟೀಂ ಇಂಡಿಯಾ ಇಂತಿದೆ: ಇಶಾನ್ ಕಿಶಾನ್ (ವಿಕೆಟ್ ಕೀಪರ್) ಶುಭ್ ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ) ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್ , ಉಮ್ರಾನ್ ಮಲ್ಲಿಕ್, ಅರ್ಶದೀಪ್ ಸಿಂಗ್
ನ್ಯೂಜಿಲೆಂಡ್ ತಂಡ ಇಂತಿದೆ: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್) ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್(ನಾಯಕ) ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್