
ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ
ಲಖನೌ: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಲಖನೌನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಮೈದಾನದಲ್ಲಿ 2ನೇ ಟಿ20 ಪಂದ್ಯ ನಡೆಯುತ್ತಿದ್ದು, ಕಿವೀಸ್ ನಾಯಕ ಮಿಚೆಲ್ ಸ್ಯಾಂಥನರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಟೂರ್ನಿಯ ಮೊದಲ ಪಂದ್ಯವನ್ನು ಗೆದ್ದಿರುವ ನ್ಯೂಜಿಲೆಂಡ್ 2ನೇ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ.
ಇದನ್ನೂ ಓದಿ: ಒಂದೇ ಕೈಯಲ್ಲಿ ವಾಷಿಂಗ್ಟನ್ ಸುಂದರ್ ಹಿಡಿದ ಅದ್ಭುತ ಕ್ಯಾಚ್ ನೋಡಿದ ದಂಗಾದ ಬ್ಯಾಟರ್, ವಿಡಿಯೋ ವೈರಲ್!
ಇನ್ನು ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಉಮ್ರಾನ್ ಮಲ್ಲಿಕ್ ಬದಲಿಗೆ ಯಜುವೇಂದ್ರ ಚಹಲ್ ಗೆ ಅವಕಾಶ ನೀಡಲಾಗಿದೆ. ಇತ್ತ ನ್ಯೂಜಿಲೆಂಡ್ ತಂಡ ಮೊದಲ ಟಿ20 ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.
ತಂಡಗಳು ಇಂತಿವೆ.
ಭಾರತ: ಶುಭಮನ್ ಗಿಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್