ಪದಾರ್ಪಣೆ ಪಂದ್ಯದಲ್ಲೇ ಶತಕ, ಪಂದ್ಯ ಶ್ರೇಷ್ಠ ಪ್ರಶಸ್ತಿ; ಯಶಸ್ವಿ ಜೈಸ್ವಾಲ್ ಆಟಕ್ಕೆ ಹಲವು ದಾಖಲೆ ಧೂಳಿಪಟ
ಪದಾರ್ಪಣೆ ಪಂದ್ಯದಲ್ಲೇ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದು ಭಾರತ ತಂಡದ ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ಅಮೋಘ ಬ್ಯಾಟಿಂಗ್ ನಿಂದಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ.
Published: 15th July 2023 02:04 PM | Last Updated: 15th July 2023 03:27 PM | A+A A-

ಯಶಸ್ವಿ ಜೈಸ್ವಾಲ್
ಡೊಮೆನಿಕಾ: ಪದಾರ್ಪಣೆ ಪಂದ್ಯದಲ್ಲೇ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದು ಭಾರತ ತಂಡದ ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ಅಮೋಘ ಬ್ಯಾಟಿಂಗ್ ನಿಂದಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ.
ವಿಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಮಾಡಿದ ಐಪಿಎಲ್ ಸೆನ್ಸೇಷನ್ ಯಶಸ್ವಿ ಜೈಸ್ವಾಲ್ ಈ ಪಂದ್ಯದ ಮೂಲಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಟೆಸ್ಟ್‌ಗೆ ಪದಾರ್ಪಣೆ ಮಾಡಿದರು. ಎರಡನೇ ದಿನ ಶತಕ ಸಿಡಿಸಿ ಮಿಂಚಿದರು. ಈ ಅನುಕ್ರಮದಲ್ಲಿ, ಅವರು ಟೀಂ ಇಂಡಿಯಾ ಪರ ತಮ್ಮ ಚೊಚ್ಚಲ ಟೆಸ್ಟ್‌ನಲ್ಲಿ ಶತಕ ಗಳಿಸಿದ 17ನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ವೆಸ್ಟ್ ಇಂಡೀಸ್ ವಿರುದ್ಧ ಈ ದಾಖಲೆ ಬರೆದ ಮೊದಲ ಬ್ಯಾಟರ್ ಎನಿಸಿಕೊಂಡರು. ಅಂತೆಯೇ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ ಮೂರನೇ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದು, ಶಿಖರ್ ಧವನ್, ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್ ಈ ಮೊದಲು ಈ ಸಾಧನೆ ಮಾಡಿದ್ದರು.
ಇದನ್ನೂ ಓದಿ: ಒಂದೇ ಟೆಸ್ಟ್ ನಲ್ಲಿ 12 ವಿಕೆಟ್, ಐತಿಹಾಸಿಕ ಸರಣಿ ದಾಖಲೆ ನಿರ್ಮಿಸಿದ ಆರ್ ಆಶ್ವಿನ್
ಅಂತೆಯೇ ಭಾರತದ ಪರ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ ನಾಲ್ಕನೇ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದು, ಪೃಥ್ವಿ ಶಾ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಅಬ್ಬಾಸ್ ಅಲಿ, ವಿಶ್ವನಾಥ್ ಮತ್ತು ಯಶಸ್ವಿ ಜೈಸ್ವಾಲ್ ಮುಂಚೂಣಿಯಲ್ಲಿದ್ದಾರೆ. ಪೃಥ್ವಿ ಶಾ 18 ವರ್ಷ 329 ದಿನಗಳಲ್ಲಿ ಶತಕ ಸಿಡಿಸಿದ್ದರು. ಅಬ್ಬಾಸ್ ಅಲಿ 20 ವರ್ಷ 126 ದಿನಗಳಲ್ಲಿ ಶತಕ ದಾಖಲಿಸಿದ್ದರು. ವಿಶ್ವನಾಥ್ 20 ವರ್ಷ 276 ದಿನದಲ್ಲಿ ಈ ಸಾಧನೆ ಮಾಡಿದರೆ, ಯಶಸ್ವಿ 21 ವರ್ಷ 196 ದಿನದಲ್ಲಿ ಸಾಧನೆ ಮಾಡಿದ್ದಾರೆ.
ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ ಮೂರನೇ ಆರಂಭಿಕ ಆಟಗಾರ
ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ ಮೂರನೇ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾದರು. ಶಿಖರ್ ಧವನ್, ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್ ಈ ಮೊದಲು ಈ ಸಾಧನೆ ಮಾಡಿದ್ದರು. ಕಳೆದ ಕೆಲವು ವರ್ಷಗಳಿಂದ ಯಶಸ್ವಿ ಜೈಸ್ವಾಲ್ ರಣಜಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ, ಈ ವರ್ಷದ ಐಪಿಎಲ್‌ನಲ್ಲಿ ಅವರ ಅದ್ಭುತ ಪ್ರದರ್ಶನದ ನಂತರ ಅವರಿಗೆ ಟೀಂ ಇಂಡಿಯಾಗೆ ಬಂದಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡರು. ಬಿಸಿಸಿಐ ಕೂಡ ಜೈಸ್ವಾಲ್ ಅವರನ್ನು ಟಿ20 ಸರಣಿಗೆ ಆಯ್ಕೆ ಮಾಡಿದೆ.
ಇದನ್ನೂ ಓದಿ: ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್ ಮತ್ತು 141 ರನ್ ಭರ್ಜರಿ ಜಯ
ಟೆಸ್ಟ್ ಕ್ರಿಕೆಟ್ ಇತಿಹಾಸದ ನೂತನ ದಾಖಲೆ
ಡೊಮಿನಿಕಾದಲ್ಲಿ ಅಶಸ್ವಿ ಜೈಸ್ವಾಲ್ ಅದ್ಭುತ ಶತಕವನ್ನು ಗಳಿಸುವ ಮೂಲಕ ಪಾದಾರ್ಪಣೆ ಪಂದ್ಯದಲ್ಲಿ ಶತಕ ಗಳಿಸಿದ ಭಾರತದ 7ನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಡೊಮಿನಿಕಾದಲ್ಲಿ ಅಶಸ್ವಿ ಜೈಸ್ವಾಲ್ ಅದ್ಭುತ ಶತಕವನ್ನು ಗಳಿಸುವ ಮೂಲಕ ಪಾದಾರ್ಪಣೆ ಪಂದ್ಯದಲ್ಲಿ ಶತಕ ಗಳಿಸಿದ ಭಾರತದ 7ನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ಪಂದ್ಯದ ಎರಡನೇ ದಿನ ಶತಕ ಸಿಡಿಸಿದ್ದ ಯಶಸ್ವಿ, ಮೂರನೇ ದಿನವಾದ ಶುಕ್ರವಾರ ಒಟ್ಟು 171 ರನ್‌ಗಳನ್ನು ಸಿಡಿಸಿ ವಿಕೆಟ್ ಒಪ್ಪಿಸಿದರು. ಇದರ ಹೊರತಾಗಿಯೂ ವಿದೇಶಿ ನೆಲದಲ್ಲಿ ಟೆಸ್ಟ್ ಪದಾರ್ಪಣೆ ಪಂದ್ಯದಲ್ಲಿ 150ಕ್ಕೂ ಹೆಚ್ಚಿನ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಸಾಧನೆಗೆ ಯಶಸ್ವಿ ಜೈಸ್ವಾಲ್ ಭಾಜನರಾಗಿದ್ದಾರೆ.
ರೋಹಿತ್ ಶರ್ಮಾ ಜತೆ ದಾಖಲೆಯ ಜತೆಯಾಟ
ಯಶಸ್ವಿ ಜೈಸ್ವಾಲ್ ಜೊತೆ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದ್ದರು. 221 ಎಸೆತಗಳಲ್ಲಿ ರೋಹಿತ್ ಶರ್ಮಾ 103 ರನ್ ಗಳಿಸಿದ್ದರು. ಇದರ ಜೊತೆಗೆ ಮುರಿಯದ ಮೊದಲನೇ ವಿಕೆಟ್‌ಗೆ ಜೈಸ್ವಾಲ್ ಹಾಗೂ ರೋಹಿತ್ 229 ರನ್‌ಗಳನ್ನು ಕಲೆ ಹಾಕಿದ್ದರು. ಇದು ವೆಸ್ಟ್ ಇಂಡೀಸ್‌ನಲ್ಲಿ ಭಾರತದ ಪರ ಮೊದಲನೇ ವಿಕೆಟ್‌ಗೆ ದಾಖಲಾದ ಗರಿಷ್ಠ ಜತೆಯಾಟವಾಗಿದೆ.
ಇದನ್ನೂ ಓದಿ: ವಿಂಡೀಸ್ ವಿರುದ್ಧ ಮೊದಲ ಟೆಸ್ಟ್: ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದ ಆರ್ ಅಶ್ವಿನ್, ಆ್ಯಂಡರ್‌ಸನ್ ದಾಖಲೆ ಪತನ!
91 ವರ್ಷಗಳ ಟೆಸ್ಟ್ ಇತಿಹಾಸ
ಜೈಸ್ವಾಲ್ ವಿದೇಶದಲ್ಲಿ ಚೊಚ್ಚಲ ಟೆಸ್ಟ್‌ನಲ್ಲಿ ಶತಕ ಗಳಿಸಿದ ಒಟ್ಟಾರೆ 6ನೇ ಭಾರತೀಯರಾಗಿದ್ದಾರೆ. 1959ರಲ್ಲಿ ಇಂಗ್ಲೆಂಡ್ ವಿರುದ್ಧ ಅಬ್ಬಾಸ್ ಅಲಿ ಬೇಗ್ ಮೊದಲ ಈ ಸಾಧನೆ ಮಾಡಿದ್ದರು. ನಂತರ 1976ರಲ್ಲಿ ಆಕ್ಲೆಂಡ್‌ನಲ್ಲಿ ಸುರೀಂದರ್ ಅಮರನಾಥ್, 1992ರಲ್ಲಿ ಡರ್ಬನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪ್ರವೀಣ್ ಆಮ್ರೆ, 1996ರಲ್ಲಿ ಇಂಗ್ಲೆಂಡ್ ಎದುರು ಸೌರವ್ ಗಂಗೂಲಿ ಲಾರ್ಡ್ಸ್‌ನಲ್ಲಿ ಮತ್ತು ವೀರೇಂದ್ರ ಸೆಹ್ವಾಗ್ ದಕ್ಷಿಣ ಆಫ್ರಿಕಾ ವಿರುದ್ಧ 2001ರಲ್ಲಿ ಬ್ಲೋಮ್ಫಾಂಟೈಮನ್ನಲ್ಲಿ ತಮ್ಮ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ್ದರು.