ಏಷ್ಯಾ ಕಪ್ 2023: ಸೆಪ್ಟೆಂಬರ್ 2 ರಿಂದ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಅಭಿಯಾನ ಆರಂಭ

ಭಾರತ ಮತ್ತು ಪಾಕಿಸ್ತಾನ ನಡುವೆ ಸಾಕಷ್ಟು ಹಗ್ಗಜಗ್ಗಾಟಕ್ಕೆ ಕಾರಣವಾಗಿ ವಿಳಂಬವಾಗಿದ್ದ ಏಷ್ಯಾಕಪ್ 2023 ಟೂರ್ನಿಯ ಅಂತಿಮ ವೇಳಾಪಟ್ಟಿ ಕೊನೆಗೂ ಬಿಡುಗಡೆಯಾಗಿದ್ದು, ಸೆಪ್ಟೆಂಬರ್ 2 ರಿಂದ ಕ್ಯಾಂಡಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಅಭಿಯಾನ ಆರಂಭವಾಗಲಿದೆ.
ಏಷ್ಯಾಕಪ್ 2023:
ಏಷ್ಯಾಕಪ್ 2023:

ಚೆನ್ನೈ: ಭಾರತ ಮತ್ತು ಪಾಕಿಸ್ತಾನ ನಡುವೆ ಸಾಕಷ್ಟು ಹಗ್ಗಜಗ್ಗಾಟಕ್ಕೆ ಕಾರಣವಾಗಿ ವಿಳಂಬವಾಗಿದ್ದ ಏಷ್ಯಾಕಪ್ 2023 ಟೂರ್ನಿಯ ಅಂತಿಮ ವೇಳಾಪಟ್ಟಿ ಕೊನೆಗೂ ಬಿಡುಗಡೆಯಾಗಿದ್ದು, ಸೆಪ್ಟೆಂಬರ್ 2 ರಿಂದ ಕ್ಯಾಂಡಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಅಭಿಯಾನ ಆರಂಭವಾಗಲಿದೆ.

ಈ ಬಾರಿ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ಏಷ್ಯಾಕಪ್ ಟೂರ್ನಿ ಆಯೋಜನೆಯಾಗಿದ್ದು, ಪಾಕಿಸ್ತಾನದಲ್ಲಿ ಆಡಲು ನಿರಾಕರಿಸಿದ ಭಾರತಕ್ಕೆ ಅವಕಾಶ ಕಲ್ಪಿಸಲು ಪರಿಚಯಿಸಲಾದ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಪಾಕಿಸ್ತಾನ ತಂಡದ ವಿರೋಧದ ಹೊರತಾಗಿಯೂ ಟೂರ್ನಿ ಆಯೋಜನೆಯಲ್ಲಿ ಬಿಸಿಸಿಐ ಮೇಲುಗೈ ಸಾಧಿಸಿದ್ದು, ಏಷ್ಯಾ ಕಪ್ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಬಿಸಿಸಿಐ ನಿಲುವಿಗೆ ಕೊನೆಗೂ ಬಗ್ಗಿದ ಪಿಸಿಬಿ
ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಟೂರ್ನಿ ಚರ್ಚೆಗೆ ಗ್ರಾಸವಾಗಿದ್ದು, ತಮ್ಮ ಸರ್ಕಾರದ ಅನುಮತಿ ಇಲ್ಲದ ಕಾರಣಕ್ಕೆ ತಂಡವನ್ನು ದೇಶಕ್ಕೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಹೆಚ್ಚಿನ ಚರ್ಚೆಯ ನಂತರ, ಎಸಿಸಿ ಅಂತಿಮವಾಗಿ ಮಾಜಿ PCB ಅಧ್ಯಕ್ಷ ನಜಮ್ ಸೇಥಿ ಪ್ರಸ್ತಾಪಿಸಿದ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡಿತು. ನಂತರ, ವೇಳಾಪಟ್ಟಿಯನ್ನು ಅಂತಿಮಗೊಳಿಸಲು ಐಸಿಸಿ ಎಜಿಎಂ ಸಮಯದಲ್ಲಿ ಡರ್ಬನ್‌ನಲ್ಲಿ ಬಿಸಿಸಿಐ ಕಾರ್ಯದರ್ಶಿ ಶಾ ಮತ್ತು ಪ್ರಸ್ತುತ ಪಿಸಿಬಿ ಅಧ್ಯಕ್ಷ ಝಾಕಾ ಅಶ್ರಫ್ ಸಭೆಯೊಂದಿಗೆ ಏಷ್ಯಾ ಕಪ್ ಸಮಸ್ಯೆಯನ್ನು ಅಂತಿಮವಾಗಿ ಪರಿಹರಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ,  "ಏಷ್ಯಾ ಕಪ್ ಖಂಡದಾದ್ಯಂತದ ಕ್ರಿಕೆಟ್ ಉತ್ಸಾಹಿಗಳ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಇದು ಕೇವಲ ಪಂದ್ಯಾವಳಿಯನ್ನು ಮೀರಿದೆ; ಇದು ನಮ್ಮ ವೈವಿಧ್ಯಮಯ ರಾಷ್ಟ್ರಗಳನ್ನು ಒಟ್ಟಿಗೆ ಬಂಧಿಸುವ ಸಂಸ್ಕೃತಿಗಳು, ಸಂಪ್ರದಾಯಗಳು ಮತ್ತು ಆಟದ ಮೇಲಿನ ಉತ್ಸಾಹದ ಶ್ರೀಮಂತ ವಸ್ತ್ರವನ್ನು ಸಂಕೇತಿಸುತ್ತದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 30 ರಂದು ಮುಲ್ತಾನ್‌ನಲ್ಲಿ ನಡೆಯಲಿರುವ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನವು ನೇಪಾಳ ತಂಡವನ್ನು ಎದುರಿಸಲಿದೆ. ಭಾರತವು ಸೆಪ್ಟೆಂಬರ್ 2 ರಂದು ಕ್ಯಾಂಡಿಯಲ್ಲಿ ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಭಾರತ, ಪಾಕಿಸ್ತಾನ ಮತ್ತು ನೇಪಾಳವು ಎ ಗುಂಪಿನಲ್ಲಿದ್ದರೆ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನವು ಬಿ ಗುಂಪಿನಲ್ಲಿದೆ. 

ವೇಳಾಪಟ್ಟಿ ಬದಲಾಗದಿದ್ದರೆ ಪಾಕಿಸ್ತಾನದಲ್ಲಿ ಭಾರತದ ಪಂದ್ಯ?
ಈಗಿನ ವೇಳಾಪಟ್ಟಿಯನ್ನು ಬದಲಾಯಿಸದೇ ಹೊದರೆ, ಒಂದೇ ಒಂದು ಪಂದ್ಯಕ್ಕಾಗಿ ಟೀಂ ಇಂಡಿಯಾ (Team India), ಪಾಕಿಸ್ತಾನದ ನೆಲಕ್ಕೆ ಕಾಲಿಡುವ ಸಾಧ್ಯತೆ ಇದೆ. ಈಗ ನಿಗದಿಯಾಗಿರುವಂತೆ ಪಾಕಿಸ್ತಾನದಲ್ಲಿ ನಾಲ್ಕು ಪಂದ್ಯಗಳು ನಡೆಯಲ್ಲಿದ್ದು, ಮೊದಲ ಪಂದ್ಯ ಪಾಕಿಸ್ತಾನ ಮತ್ತು ನೇಪಾಳ ನಡುವೆ ಮುಲ್ತಾನ್‌ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ನಡುವೆ ಲಾಹೋರ್‌ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವೆ ಲಾಹೋರ್‌ನಲ್ಲಿ ನಡೆಯಲಿದೆ. ಹಾಗೆಯೇ ಸೂಪರ್ ಫೋರ್ ಹಂತದಲ್ಲಿ ಏಕೈಕ ಪಂದ್ಯ ಪಾಕ್ ನೆಲದಲ್ಲಿ ನಡೆಯಲ್ಲಿದ್ದು, ಈ ಪಂದ್ಯದಲ್ಲಿ ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ ಹಾಗೂ ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡಗಳು ಮುಖಾಮುಖಿಯಾಗುತ್ತವೆ. ಇದೀಗ ಈ ಪಂದ್ಯ ಟೀಂ ಇಂಡಿಯಾದ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಪಾಕ್ ನೆಲದಲ್ಲಿ ಸೂಪರ್ ಹಂತದ ಮೊದಲ ಪಂದ್ಯ
ಅಂದರೆ ವೇಳಾಪಟ್ಟಿಯ ಪ್ರಕಾರ ಭಾರತ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಹೀಗಾಗಿ ಟೀಂ ಇಂಡಿಯಾ ಲೀಗ್ ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡರೆ, ಆಗ ಸೂಪರ್ ಫೋರ್ ಹಂತದಲ್ಲಿ ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡವನ್ನು ಎದುರಿಸಲು ಲಾಹೋರ್​ಗೆ ಪ್ರಯಾಣ ಬೆಳೆಸಬೇಕಾಗುತ್ತದೆ. ಏಕೆಂದರೆ ಸೂಪರ್​ ಫೋರ್ ಹಂತದ ಮೊದಲ ಪಂದ್ಯವನ್ನು ಲಾಹೋರ್​ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇದನ್ನು ನಾವು ವೇಳಾಪಟ್ಟಿಯಲ್ಲೂ ಗಮನಿಸಬಹುದಾಗಿದೆ. ಈ ಪಂದ್ಯ ಸೆಪ್ಟೆಂಬರ್ 6 ರಂದು ನಡೆಯಲಿದೆ. ಹೀಗಾಗಿ ಭಾರತ ಲೀಗ್ ಹಂತದಲ್ಲಿ ಮೊದಲ ಸ್ಥಾನ ಪಡೆದರೆ, ಸೂಪರ್ ಫೋರ್ ಹಂತದ ಮೊದಲ ಪಂದ್ಯ ಆಡಲು ಪಾಕಿಸ್ತಾನಕ್ಕೆ ಹೋಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

ಒಂದು ವೇಳೆ ಭಾರತ ಸೂಪರ್ ಫೋರ್ ಘಟ್ಟದಲ್ಲಿ ಎ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದರೆ, ಆಗ ಶ್ರೀಲಂಕಾದಲ್ಲಿ ಪಂದ್ಯವನ್ನು ಆಡಬಹುದಾಗಿದೆ. ಏಕೆಂದರೆ ಈಗ ನಿಗದಿಯಾಗಿರುವ ವೇಳಾಪಟ್ಟಿಯ ಪ್ರಕಾರ ಸೂಪರ್ ಫೋರ್ ಹಂತದಲ್ಲಿ ಎ ಗುಂಪಿನಲ್ಲಿ 2ನೇ ಸ್ಥಾನ ಪಡೆಯುವ ತಂಡವು ಬಿ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡವನ್ನು ಸೆಪ್ಟಂಬರ್ 12 ರಂದು ಕೊಲಂಬೊದಲ್ಲಿ ಎದುರಿಸಲಿದೆ.

ಮೂರು ತಂಡಗಳ ಎರಡು ಗುಂಪು
ಏಷ್ಯಾಕಪ್​ನಲ್ಲಿ ಒಟ್ಟು ಆರು ತಂಡಗಳಿದ್ದು, ಮೂರು ತಂಡಗಳ ಎರಡು ಗುಂಪುಗಳನ್ನು ರಚಿಸಲಾಗಿದೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ ಒಂದು ಗುಂಪಿನಲ್ಲಿ ಅಂದರೆ ಎ ಗುಂಪಿನಲ್ಲಿದ್ದರೆ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಮತ್ತೊಂದು ಗುಂಪಿನಲ್ಲಿ ಅಂದರೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಎರಡೂ ಗುಂಪಿನ ಅಗ್ರ ಎರಡು ತಂಡಗಳು ಸೂಪರ್ ಫೋರ್‌ಗೆ ಅರ್ಹತೆ ಪಡೆಯುತ್ತವೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿದ್ದು, ಈ ಎರಡೂ ತಂಡಗಳು ಸೂಪರ್ ಫೋರ್ ತಲುಪುವುದು ಖಚಿತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com