WTC ಫೈನಲ್: ಕಪ್ಪು ಪಟ್ಟಿ ಧರಿಸಿ ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ ಗೌರವ ಸಲ್ಲಿಸಿದ ಭಾರತ, ಆಸ್ಟ್ರೇಲಿಯಾ
ಲಂಡನ್ ನ ದಿ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮತ್ತು ಪಂದ್ಯದ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸುವ ಮೂಲಕ...
Published: 07th June 2023 04:43 PM | Last Updated: 07th June 2023 06:27 PM | A+A A-

ಭಾರತ ತಂಡ
ಲಂಡನ್: ಲಂಡನ್ ನ ದಿ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮತ್ತು ಪಂದ್ಯದ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸುವ ಮೂಲಕ ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ ಗೌರವ ಸಲ್ಲಿಸಿದರು.
ರಾಷ್ಟ್ರಗೀತೆಗೂ ಮೊದಲು, ಎಲ್ಲರೂ ತಮ್ಮ ತೋಳಿಗೆ ಕಪ್ಪು ಪಟ್ಟಿಗಳನ್ನು ಧರಿಸಿ, ಒಂದು ನಿಮಿಷ ಮೌನ ಆಚರಿಸುವ ಮೂಲಕ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ರೈಲು ನಿಲ್ದಾಣದ ಬಳಿ ಕಳೆದ ಶುಕ್ರವಾರ ಸಂಭವಿಸಿದ ರೈಲು ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದರು.
ಇದನ್ನು ಓದಿ: WTC ಫೈನಲ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ!
ಕಳೆದ ಶುಕ್ರವಾರ, ತ್ರಿವಳಿ ಭೀಕರ ರೈಲು ಅಪಘಾತದಲ್ಲಿ 288 ಜನ ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಡಬ್ಲುಟಿಸಿ ಫೈನಲ್ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.