ಐಸಿಸಿ ವಿಶ್ವ ಟೆಸ್ಟ್  ಚಾಂಪಿಯನ್ ಶಿಪ್ ಫೈನಲ್: ಆಸ್ಟ್ರೇಲಿಯಾಕ್ಕೆ 296 ರನ್ ಗಳ ಮುನ್ನಡೆ

ಲಂಡನ್‌ ನ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೂರನೇ ದಿನವಾದ ಶುಕ್ರವಾರ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 123 ರನ್ ಗಳಿಸುವ ಮೂಲಕ 296 ರನ್ ಗಳಿಂದ ಮುನ್ನಡೆ ಪಡೆದುಕೊಂಡಿದೆ.
ಬೌಲರ್ ಮೊಹಮ್ಮದ್ ಸಿರಾಜ್ ಅಭಿನಂದಿಸುತ್ತಿರುವ ಆಸ್ಟ್ರೇಲಿಯಾ ಆಟಗಾರರು
ಬೌಲರ್ ಮೊಹಮ್ಮದ್ ಸಿರಾಜ್ ಅಭಿನಂದಿಸುತ್ತಿರುವ ಆಸ್ಟ್ರೇಲಿಯಾ ಆಟಗಾರರು

ಲಂಡನ್ : ಲಂಡನ್‌ ನ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೂರನೇ ದಿನವಾದ ಶುಕ್ರವಾರ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 123 ರನ್ ಗಳಿಸುವ ಮೂಲಕ 296 ರನ್ ಗಳಿಂದ ಮುನ್ನಡೆ ಪಡೆದುಕೊಂಡಿದೆ.

ಪಂದ್ಯ ಮುಕ್ತಾಯದ ವೇಳೆಗೆ, ಮಾರ್ನಸ್ ಲ್ಯಾಬುಸ್ಚಾಗ್ನೆ ಮತ್ತು ಕ್ಯಾಮರೂನ್ ಗ್ರೀನ್ ಕ್ರಮವಾಗಿ 41 ಮತ್ತು 7 ರನ್ ಗಳಿಸುವ ಮೂಲಕ ಶನಿವಾರದ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇದಕ್ಕೂ ಮುನ್ನಾ ಬ್ಯಾಟಿಂಗ್ ಪುನರ್ ಆರಂಭಿಸಿದ ಭಾರತ  ಕೆಎಸ್ ಭಾರತ್ ಅವರನ್ನು ಬೇಗನೆ ಕಳೆದುಕೊಂಡಿತು. ಆದರೆ ಅಜಿಂಕ್ಯ ರಹಾನೆ (89) ಮತ್ತು ಶಾರ್ದೂಲ್ ಠಾಕೂರ್ (51) ಏಳನೇ ವಿಕೆಟ್‌ಗೆ 109 ರನ್‌ಗಳನ್ನು ಸೇರಿಸುವ ಮೂಲಕ ತಮ್ಮ ತಂಡವನ್ನು ಫಾಲೋ-ಆನ್ ಭೀತಿಯಿಂದ ತಪ್ಪಿಸಲು ಸಹಾಯ ಮಾಡಿದರು.

ಆದರೆ, ಭೋಜನ ವಿರಾಮದ ನಂತರ ಭಾರತ ಉಳಿದ ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡು 69.4 ಓವರ್‌ಗಳಲ್ಲಿ 296 ರನ್ ಗಳಿಸಿತು. ಆಸ್ಟ್ರೇಲಿಯಾ ಪರ ನಾಯಕ ಪ್ಯಾಟ್ ಕಮ್ಮಿನ್ಸ್ ಮೂರು ವಿಕೆಟುಗಳನ್ನು ಕಬಳಿಸಿದರೆ, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್ ಮತ್ತು ಕ್ಯಾಮರೂನ್ ಗ್ರೀನ್ ತಲಾ ಎರಡು ವಿಕೆಟ್ ಪಡೆದರು.

ಸಂಕ್ಷಿಪ್ತ ಅಂಕಗಳು: ಆಸ್ಟ್ರೇಲಿಯಾ:  ಮೊದಲ ಇನ್ನಿಂಗ್ಸ್ 469, ಎರಡನೇ ಇನ್ನಿಂಗ್ಸ್ : 123/4

ಭಾರತ ಮೊದಲ ಇನಿಂಗ್ಸ್: 69.4 ಓವರ್‌ಗಳಲ್ಲಿ 296 (ಅಜಿಂಕ್ಯ ರಹಾನೆ 89, ಶಾರ್ದೂಲ್ ಠಾಕೂರ್ 51, ರವೀಂದ್ರ ಜಡೇಜಾ 48; ಪ್ಯಾಟ್ ಕಮಿನ್ಸ್ 3/83).
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com