ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್: ಆಸಿಸ್ ಪಿಎಂ ಜೊತೆ ಕ್ರಿಕೆಟ್ ಪ್ರಧಾನಿ ಮೋದಿ ಪಂದ್ಯ ವೀಕ್ಷಣೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಜಂಟಿಯಾಗಿ ವೀಕ್ಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ಮೋದಿ ಮತ್ತು ಆಸಿಸ್ ಪ್ರಧಾನಿ ಆಂಥೋನಿ ಅಲ್ಬನೀಸ್
ಪ್ರಧಾನಿ ಮೋದಿ ಮತ್ತು ಆಸಿಸ್ ಪ್ರಧಾನಿ ಆಂಥೋನಿ ಅಲ್ಬನೀಸ್

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಜಂಟಿಯಾಗಿ ವೀಕ್ಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಹೌದು.. ಇದೇ ಮಾರ್ಚ್ 9ರಿಂದ ಆರಂಭವಾಗಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯಕ್ಕೆ ವಿಶೇಷ ಅತಿಥಿಗಳ ಆಗಮನವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಸಿಸ್ ಸಹವರ್ತಿ ಆಂಥೋನಿ ಅಲ್ಬನೀಸ್ ಜಂಟಿಯಾಗಿ ಈ ಪಂದ್ಯ ವೀಕ್ಷಣೆ ಮಾಡಲಿದ್ದಾರೆ. 

ಈಗಾಗಲೇ ಉಭಯ ದೇಶಗಳ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಅಂತಿಮ ಹಂತಕ್ಕೆ ತಲುಪಿದ್ದು, 4 ಪಂದ್ಯಗಳಲ್ಲಿ ಸರಣಿಯಲ್ಲಿ ಭಾರತ 2-1 ಮುನ್ನಡೆ ಕಾಯ್ದುಕೊಂಡಿದೆ. ಸರಣಿ ಸಮಬಲಕ್ಕೆ ಆಸಿಸ್ ಮುಂದಿನ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದ್ದು, ಈ ಪಂದ್ಯದ ಗೆಲುವಿನ ಮೂಲಕ ಟೆಸ್ಟ್ ಸರಣಿ ಕೈವಶ ಮಾತ್ರವಲ್ಲದೇ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನ ಫೈನಲ್ ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಟೀಂ ಇಂಡಿಯಾ ಇದೆ. ಹೀಗಾಗಿ ಈ ಪಂದ್ಯ ಆಸ್ಟ್ರೇಲಿಯಾಗಿಂತ ಹೆಚ್ಚಾಗಿ ಭಾರತಕ್ಕೆ ಪ್ರಮುಖವಾಗಿದೆ.

ಇದೇ ಮಾರ್ಚ್ ರಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಹೈ ವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದು ಪಂದ್ಯದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com