4ನೇ ಟೆಸ್ಟ್: ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ದಾಖಲೆ; ಸಚಿನ್, ಕೊಹ್ಲಿ, ಧೋನಿ ಇರುವ ಎಲೈಟ್ ಪಟ್ಟಿಗೆ ಸೇರ್ಪಡೆ
ಬಾರ್ಡರ್ ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಕ್ರಿಕೆಟ್ ತಂಡದ ನಾಯಕ ಅಮೋಘ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸಚಿನ್, ಕೊಹ್ಲಿ, ಧೋನಿ ಇರುವ ಎಲೈಟ್ ಪಟ್ಟಿಗೆ ಸೇರ್ಪಡೆಗೆ ಸೇರ್ಪಡೆಯಾಗಿದ್ದಾರೆ.
Published: 11th March 2023 02:00 PM | Last Updated: 11th March 2023 03:50 PM | A+A A-

ರೋಹಿತ್ ಶರ್ಮಾ ದಾಖಲೆ
ಅಹ್ಮದಾಬಾದ್: ಬಾರ್ಡರ್ ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಕ್ರಿಕೆಟ್ ತಂಡದ ನಾಯಕ ಅಮೋಘ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸಚಿನ್, ಕೊಹ್ಲಿ, ಧೋನಿ ಇರುವ ಎಲೈಟ್ ಪಟ್ಟಿಗೆ ಸೇರ್ಪಡೆಗೆ ಸೇರ್ಪಡೆಯಾಗಿದ್ದಾರೆ.
ಹೌದು.. ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 35 ರನ್ ಗಳಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17,000 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಆ ಮೂಲಕ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17,000 ರನ್ ಪೂರೈಸಿದ 6ನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮೊದಲು ಭಾರತದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಈ ಸಾಧನೆ ಮಾಡಿದ್ದರು. ಅಲ್ಲದೆ ಇಂಗ್ಲೆಂಡ್ ನ ಜೋ ರೂಟ್ ಮತ್ತು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಕೂಡ 17000 ರನ್ ಗಳಿಸಿದ ಸಾದಕರ ಪಟ್ಟಿಯಲ್ಲಿದ್ದಾರೆ. ಇದೀಗ ಈ ಪಟ್ಟಿಗೆ ರೋಹಿತ್ ಶರ್ಮಾ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: 4ನೇ ಟೆಸ್ಟ್; ಆಸಿಸ್ ವಿರುದ್ದ ಭರ್ಜರಿ ಬೌಲಿಂಗ್; ಕುಂಬ್ಳೆ ದಾಖಲೆ ಪತನ ಸೇರಿ ಹಲವು ದಾಖಲೆ ನಿರ್ಮಿಸಿದ ಆರ್ ಅಶ್ವಿನ್
ರೋಹಿತ್‌ಗಿಂತ ಮೊದಲು ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಎಂಎಸ್ ಧೋನಿ ಮತ್ತು ವೀರೇಂದ್ರ ಸೆಹ್ವಾಗ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇಂತಹ ಸಾಧನೆ ಮಾಡಿದ ಆಟಗರರಾಗಿದ್ದಾರೆ. ಇನ್ನು ಮಾಸ್ಚರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಭಾರತದ ಪರ ಮತ್ತು ವಿಶ್ವ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅಂತರಾಷ್ಟ್ರೀಯ ರನ್ ಗಳಿಸಿದ ಆಟಗಾರರಾಗಿದ್ದು, ಅವರು ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಒಟ್ಟು 34,357 ರನ್ ಗಳಿಸಿದ ದಾಖಲೆ ಹೊಂದಿದ್ದಾರೆ. ಅನವರ ನಂತರದ ಸ್ಥಾನದಲ್ಲಿ ಶ್ರೀಲಂಕಾ ಕ್ರಿಕೆಟ್ ನ ದಂತಕಥೆ 28,016 ರನ್ ಗಳಿಸಿರುವ ಕುಮಾರ ಸಂಗಕ್ಕಾರ ಎರಡನೇ ಸ್ಥಾನದಲ್ಲಿದ್ದಾರೆ.
Rohit Sharma Completed 17000 Runs In International Cricket #Cricket #CricketTwitter #RohitSharma #INDvAUS #INDvsAUS #BorderGavaskarTrophy pic.twitter.com/twjIuy0pqx
— Vtrakit Cricket (@Vtrakit) March 11, 2023
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17000+ ರನ್‌ಗಳಿಸಿರುವ ಸಕ್ರಿಯ ಆಟಗಾರರು:
ವಿರಾಟ್ ಕೊಹ್ಲಿ (ಭಾರತ) - 25047
ಜೋ ರೂಟ್ (ಇಂಗ್ಲೆಂಡ್) - 18048
ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ) - 17059
ರೋಹಿತ್ ಶರ್ಮಾ (ಭಾರತ) - 17011
ಜೂನ್ 2007 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ ಒಟ್ಟು 48 ಟೆಸ್ಟ್‌ಗಳಲ್ಲಿ 3348 ರನ್, 241 ಏಕದಿನ ಪಂದ್ಯಗಳಲ್ಲಿ 9782 ರನ್ ಮತ್ತು 148 T20I ಪಂದ್ಯಗಳಲ್ಲಿ 3853 ರನ್ ಗಳಿಸಿದ್ದಾರೆ. ಅಂತೆಯೇ ರೋಹಿತ್ ಶರಮಾ ಏಕದಿನ ಕ್ರಿಕೆಟ್ ನಲ್ಲಿ ಮೂರು ದ್ವಿಶತಕಗಳನ್ನು ಗಳಿಸಿದ ವಿಶ್ವದ ಏಕೈಕ ಕ್ರಿಕೆಟಿಗರಾಗಿದ್ದಾರೆ.