ಭಾರತ-ಆಸ್ಟ್ರೇಲಿಯಾ 4ನೇ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯ; ಟೀಂ ಇಂಡಿಯಾ ವಶಕ್ಕೆ ಟೆಸ್ಟ್ ಸರಣಿ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದ್ದು, 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.
ಭಾರತ-ಆಸ್ಟ್ರೇಲಿಯಾ 4ನೇ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯ
ಭಾರತ-ಆಸ್ಟ್ರೇಲಿಯಾ 4ನೇ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯ

ಅಹ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದ್ದು, 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 4ನೇ ಟೆಸ್ಟ್ ಪಂದ್ಯ ನಿರೀಕ್ಷೆಯಂತೆಯೇ ಡ್ರಾದಲ್ಲಿ ಅಂತ್ಯವಾಗಿದೆ. ಉಭಯ ತಂಡಗಳಿಂದ ತೀವ್ರ ಪೈಪೋಟಿ ಕಂಡಿದ್ದ ಪಂದ್ಯ ಕೊನೆಗೂ ಡ್ರಾದಲ್ಲಿ ಅಂತ್ಯವಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಖವಾಜಾ (188 ರನ್) ಮತ್ತು ಗ್ರೀನ್ (114 ರನ್) ಶತಕಗಳ ನೆರವಿನಿಂದ 480 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು.

ಆಸಿಸ್ ಗೆ ತಿರುಗೇಟು ನೀಡಿದ್ದ ಭಾರತ ಕೂಡ ಮೊದಲ ಇನ್ನಿಂಗ್ಸ್ ನಲ್ಲಿ ಶುಭ್ ಮನ್ ಗಿಲ್ (128ರನ್) ಮತ್ತು ವಿರಾಟ್ ಕೊಹ್ಲಿ (186) ಶತಕ ಮತ್ತು ಅಕ್ಸರ್ ಪಟೇಲ್ ರ ಅರ್ಧಶತಕದ ನೆರವಿನಿಂದ 571 ರನ್ ಗಳ ಬೃಹತ್ ಮೊತ್ತ ಕಲೆಹಾಕಿ 91 ರನ್ ಗಳ ಮುನ್ನಡೆ ಪಡೆದಿತ್ತು. ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಚ್ರೇಲಿಯಾ ತಂಡ 2 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತ್ತು. ಈ ವೇಳೆ ಉಭಯ ತಂಡದ ನಾಯಕರು ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಕುರಿತು ಘೋಷಣೆ ಮಾಡಿದರು.

ಈ ಹಂತದಲ್ಲಿ ಆಸಿಸ್ ಪರ ಟ್ರಾವಿಸ್ ಹೆಡ್ 90 ರನ್ ಗಳಿ ಔಟಾಗಿದ್ದರು. ಕ್ರೀಸ್ ನಲ್ಲಿದ್ದ ಮಾರ್ನಸ್ ಲ್ಯಾಬುಸ್ಚಾಗ್ನೆ ಅಜೇಯ 63ರನ್ ಗಳಿಸಿದ್ದರು. ಇನ್ನು ಭಾರತದ ಪರ ಅಶ್ವಿನ್ ಮತ್ತು ಅಕ್ಸರ್ ಪಟೇಲ್ ತಲಾ ಒಂದು ಪಡೆದಿದ್ದರು. 

ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 2-1 ಅಂತರದಲ್ಲಿ ಜಯಿಸಿದ್ದು, ಅಂತೆಯೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ಸತತ 2ನೇ ಬಾರಿಗೆ ಅರ್ಹತೆ ಗಿಟ್ಟಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com