ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರಸ್ಥಾನ ಪಡೆದ ಆರ್ ಅಶ್ವಿನ್, ವಿರಾಟ್ ಕೊಹ್ಲಿ 8 ಸ್ಥಾನ ಜಿಗಿತ!
ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಇಂಗ್ಲೆಂಡ್ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿ ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
Published: 15th March 2023 08:49 PM | Last Updated: 15th March 2023 08:49 PM | A+A A-

ವಿರಾಟ್ ಕೊಹ್ಲಿ-ಅಶ್ವಿನ್
ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಇಂಗ್ಲೆಂಡ್ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿ ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಒಟ್ಟು 25 ವಿಕೆಟ್ ಪಡೆದಿರುವ ಅಶ್ವಿನ್ 869 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಂಡರ್ಸನ್ ಎರಡನೇ ಸ್ಥಾನದಲ್ಲಿದ್ದಾರೆ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಬ್ಯಾಟ್ಸ್‌ಮನ್‌ಗಳ ಟೆಸ್ಟ್ ಶ್ರೇಯಾಂಕದಲ್ಲಿ ದೊಡ್ಡ ಜಿಗಿತ ಕಂಡಿದ್ದಾರೆ. ಒಟ್ಟು ಎಂಟು ಸ್ಥಾನಗಳನ್ನು ಜಿಗಿದು ಚಾರ್ಟ್‌ನಲ್ಲಿ 13ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: ಐಪಿಎಲ್ ನಂತರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡುವುದು ಸವಾಲು: ರಾಹುಲ್ ದ್ರಾವಿಡ್
ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕ ಟಾಪ್ 10 ಪಟ್ಟಿಯಲ್ಲಿ ರಿಷಬ್ ಪಂತ್ 9ನೇ ಮತ್ತು ರೋಹಿತ್ ಶರ್ಮಾ 10ನೇ ಸ್ಥಾನದಲ್ಲಿದ್ದಾರೆ. ಅಕ್ಷರ್ ಪಟೇಲ್ ಅವರು ಸ್ಮರಣೀಯ ಆಟವಾಡಿದ್ದು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎಂಟು ಸ್ಥಾನಗಳನ್ನು ಜಿಗಿದು 44ನೇ ಸ್ಥಾನಕ್ಕೆ ತಲುಪಿದ್ದಾರೆ. ಆಲ್ ರೌಂಡರ್‌ಗಳ ಪಟ್ಟಿಯಲ್ಲಿ ಒಟ್ಟಾರೆ ನಾಲ್ಕನೇ ಸ್ಥಾನದಲ್ಲಿದ್ದು ನಾಲ್ಕು ಪಂದ್ಯಗಳಲ್ಲಿ 264 ರನ್ ಪೇರಿಸಿದ್ದಾನೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಗೆಲುವಿನ ನಂತರ ಭಾರತ 119 ರೇಟಿಂಗ್ ನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ 122 ರೇಟಿಂಗ್ ನೊಂದಿಗೆ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದಾರೆ.