ಭಾರತ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗಬೇಕೇ?: ಹರ್ಭಜನ್ ಸಿಂಗ್ ಹೇಳಿದ್ದೇನು?
ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಏಷ್ಯಾಕಪ್ ಟೂರ್ನಿ ಕುರಿತ ಗೊಂದಲಗಳು ಮುಂದುವರೆದಿರುವಂತೆಯೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
Published: 17th March 2023 01:02 PM | Last Updated: 17th March 2023 01:02 PM | A+A A-

ಹರ್ಭಜನ್ ಸಿಂಗ್
ನವದೆಹಲಿ: ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಏಷ್ಯಾಕಪ್ ಟೂರ್ನಿ ಕುರಿತ ಗೊಂದಲಗಳು ಮುಂದುವರೆದಿರುವಂತೆಯೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಏಷ್ಯಾಕಪ್ ಆತಿಥ್ಯಕ್ಕೆ ಸಂಬಂಧಿಸಿದಂತೆ ಗೊಂದಲ ಮುಂದುವರೆದಿದ್ದು, ಈ ಬಾರಿಯ ಏಷ್ಯಾಕಪ್ ಎಲ್ಲಿ ನಡೆಯಲಿದೆ ಎಂಬುದನ್ನು ಇಲ್ಲಿಯವರೆಗೆ ಎರಡೂ ಮಂಡಳಿಗಳಿಗೆ ನಿರ್ಧರಿಸಲು ಸಾಧ್ಯವಾಗಿಲ್ಲ, ರಾಜಕೀಯ ಕಾರಣಗಳಿಂದಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಹೋಗಿ ಏಷ್ಯಾಕಪ್ ಆಡಲು ಬಯಸುತ್ತಿಲ್ಲ. ಅದೇ ಸಮಯದಲ್ಲಿ, ಪಾಕಿಸ್ತಾನದ ಮಂಡಳಿಯು ಭಾರತದ ನಿರ್ಧಾರದಿಂದ ಕೋಪಗೊಂಡಿದ್ದು, ಇದು ಉಭಯ ಕ್ರಿಕೆಟ್ ಬೋರ್ಡ್‌ಗಳ ನಡುವೆ ಜಗಳಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಡಬ್ಲ್ಯುಪಿಎಲ್ 2023: ಕೊನೆಗೂ ಗೆಲುವಿನ ಖಾತೆ ತೆರೆದ ಆರ್ ಸಿಬಿ, ಯುಪಿ ವಿರುದ್ಧ 5 ವಿಕೆಟ್ ಗಳ ಜಯ
ಇದೇ ವೇಳೆ ಇದೀಗ ಹರ್ಭಜನ್ ಸಿಂಗ್ ಏಷ್ಯಾಕಪ್ ಆತಿಥ್ಯ ವಹಿಸುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, 'ಭಾರತವು ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗುವ ಅಗತ್ಯವಿಲ್ಲ, ಏಕೆಂದರೆ ಅಲ್ಲಿ ಯಾರೂ ಸುರಕ್ಷಿತವಾಗಿಲ್ಲ ಮತ್ತು ನಮಗೆ ಪ್ರಯಾಣಿಸಲು ಸಾಧ್ಯವಿಲ್ಲ. ತಮ್ಮ ಸ್ವಂತ ಜನರು ತಮ್ಮ ದೇಶದಲ್ಲಿ ಸುರಕ್ಷಿತವಾಗಿಲ್ಲದಿದ್ದಾಗ ಬೇರೆ ತಂಡಗಳು ಹೇಗೆ ಅಲ್ಲಿ ಸುರಕ್ಷಿತವಾಗಿರಬಲ್ಲವು ಎಂದು ಪ್ರಶ್ನಿಸಿದ್ದಾರೆ.
ಅಂತೆಯೇ ಯಾವುದೇ ಸರಣಿಗಾಗಿ ಪಾಕಿಸ್ತಾನಕ್ಕೆ ಹೋಗದಿರಲು ನಮ್ಮ ಸರ್ಕಾರ ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದೆ. ಏಕೆಂದರೆ ನಮ್ಮ ಮೊದಲ ಆದ್ಯತೆ ನಮ್ಮ ಆಟಗಾರರ ಸುರಕ್ಷತೆಯಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರಸ್ಥಾನ ಪಡೆದ ಆರ್ ಅಶ್ವಿನ್, ವಿರಾಟ್ ಕೊಹ್ಲಿ 8 ಸ್ಥಾನ ಜಿಗಿತ!
ಲಂಕಾದಲ್ಲಿ ಟೂರ್ನಿ ಆಯೋಜಿಸಿ: ಅಖ್ತರ್
ಇನ್ನು ಇದೇ ವಿಚಾರವಾಗಿ ಪಾಕಿಸ್ತಾನದ ವೇಗಿ ಶೊಯೆಬ್ ಅಖ್ತರ್ ಕೂಡ ಪ್ರತಿಕ್ರಿಯೆ ನೀಡಿದ್ದು, 'ಏಷ್ಯಾಕಪ್ ಆತಿಥ್ಯಕ್ಕೆ ಸಂಬಂಧಿಸಿದಂತೆ ನಿರ್ಧಾರಕ್ಕೆ ಬರದಿದ್ದರೆ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ನನ್ನ ದೃಷ್ಟಿಯಲ್ಲಿ, ಏಷ್ಯಾಕಪ್ ಅನ್ನು ಭಾರತ ಅಥವಾ ದುಬೈನಲ್ಲಿ ಅಥವಾ ಪಾಕಿಸ್ತಾನದಲ್ಲಿ ಆಯೋಜಿಸಬಾರದು. ಶ್ರೀಲಂಕಾಗೆ ನೀಡಬೇಕು ಎಂದು ಹೇಳಿದ್ದಾರೆ.